ನವದೆಹಲಿ: ಉಕ್ರೇನ್ ಮತ್ತು ಚೀನಾ ವಿವಿಗಳಲ್ಲಿ ಎಂಬಿಬಿಎಸ್ ಅಧ್ಯಯನ ಮಾಡುತ್ತಿದ್ದ ದೇಶದ ವಿದ್ಯಾರ್ಥಿಗಳು ಅರ್ಧದಿಂದಲೇ ವಾಪಸಾಗಿದ್ದಾರೆ. ಅವರಿಗೆ ಸೂಕ್ತ ವ್ಯವಸ್ಥೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸರ್ಕಾರ ಮತ್ತು ರಾಷ್ಟ್ರೀಯ ವೈದ್ಯಕೀಯ ಆಯೋಗಕ್ಕೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಇಲ್ಲದೇ ಇದ್ದರೆ ಅವರ ವೃತ್ತಿ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ ಎಂದು ನ್ಯಾ.ಬಿ.ಆರ್.ಗವಾಯಿ ಮತ್ತು ನ್ಯಾ.ವಿಕ್ರಮ್ ನಾಥ್ ನೇತೃತ್ವದ ನ್ಯಾಯಪೀಠ ಅಭಿಪ್ರಾಯಪಟ್ಟಿದೆ.
ಸಂಕಷ್ಟಕ್ಕೆ ಸಿಲುಕಿ ವಿದೇಶಗಳಿಂದ ವಾಪಸಾಗಿರುವ ವೈದ್ಯ ವಿದ್ಯಾರ್ಥಿಗಳ ಪರಿಸ್ಥಿತಿ ಅಧ್ಯಯನ ನಡೆಸಿ, ಯಾವ ಕ್ರಮಗಳನ್ನು ಕೈಗೊಳ್ಳಬೇಕು ಎಂಬ ಬಗ್ಗೆ ಪರಿಶೀಲಿಸಲು ಸಮಿತಿಯನ್ನೂ ರಚನೆ ಮಾಡಬಹುದು ಎಂದೂ ನ್ಯಾಯಪೀಠ ಸಲಹೆ ನೀಡಿದೆ. ಹೆಚ್ಚಿನ ವಿದ್ಯಾರ್ಥಿಗಳು ತರಗತಿಯಲ್ಲಿ ಅಧ್ಯಯನ ಪೂರ್ಣಗೊಳಿಸಿದ್ದರೂ, ಕ್ಲಿನಿಕಲ್ ಟ್ರೈನಿಂಗ್ ಅನ್ನು ಪಡೆಯಲು ಸಾಧ್ಯವಾಗಿಲ್ಲ ಎಂದಿತು ನ್ಯಾಯಪೀಠ.