Advertisement

ಇಡಬ್ಲ್ಯುಎಸ್‌ ಮೀಸಲಾತಿ: ಸೆ.13ರಂದು ಸುಪ್ರೀಂ ಕೋರ್ಟ್‌ ನಲ್ಲಿ ವಿಚಾರಣೆ

07:07 PM Sep 06, 2022 | Team Udayavani |

ನವದೆಹಲಿ: ಆರ್ಥಿಕವಾಗಿ ಹಿಂದುಳಿದ ವರ್ಗ(ಇಡಬ್ಲ್ಯುಎಸ್‌)ಗಳಿಗೆ ಶೇ.10 ಮೀಸಲಾತಿ ಕಲ್ಪಿಸಿರುವ ಕೇಂದ್ರ ಸರ್ಕಾರದ ನಿರ್ಧಾರದ ಸಾಂವಿಧಾನಿಕ ಮಾನ್ಯತೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಸೆ.13ರಂದು ನಡೆಸುವುದಾಗಿ ಸುಪ್ರೀಂ ಕೋರ್ಟ್‌ ಹೇಳಿದೆ.

Advertisement

ವಾದ ಮಂಡಿಸಲು ಎರಡೂ ಕಡೆಯವರಿಗೆ ಒಟ್ಟಾರೆ 18 ಗಂಟೆಗಳ ಕಾಲಾವಕಾಶ ಬೇಕು ಎಂದು ವಕೀಲರು ಅರಿಕೆ ಮಾಡಿಕೊಂಡ ಹಿನ್ನೆಲೆಯಲ್ಲಿ, 13ರಂದು ವಿಚಾರಣೆ ನಡೆಸಲು ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್‌ ಅವರನ್ನೊಳಗೊಂಡ ಐವರು ಸದಸ್ಯರ ಸಂವಿಧಾನ ಪೀಠ ನಿರ್ಧರಿಸಿತು.

Advertisement

Udayavani is now on Telegram. Click here to join our channel and stay updated with the latest news.

Next