ನವದೆಹಲಿ: ಮಹಾರಾಷ್ಟ್ರದಲ್ಲಿ ಉಂಟಾಗಿದ್ದ ರಾಜಕೀಯ ಬಿಕ್ಕಟ್ಟಿಗೆ ಸಂಬಂಧಿಸಿ ಸುಪ್ರೀಂಕೋರ್ಟ್ ಬುಧವಾರ ಮಹತ್ವದ ತೀರ್ಪು ನೀಡಲಿದೆ.
ಕಳೆದ ವರ್ಷ ಶಿವಸೇನೆಯಿಂದ ಹೊರಬಂದು ಬಿಜೆಪಿ ಜತೆಗೆ ಮೈತ್ರಿ ಮಾಡಿರುವ ಹಾಲಿ ಸಿಎಂ ಏಕನಾಥ ಶಿಂಧೆ ನೇತೃತ್ವದ ಬಣದ ರಾಜಕೀಯ ಭವಿಷ್ಯವೂ ನಿರ್ಧಾರವಾಗಲಿದೆ. ಶಿವಸೇನೆ-ಕಾಂಗ್ರೆಸ್- ಎನ್‌ಸಿಪಿ ನೇತೃತ್ವದ ಮಹಾ ವಿಕಾಸ ಅಘಾಡಿ ಸರ್ಕಾರ ಪತನಗೊಂಡು ಬಿಜೆಪಿ ಜತೆಗೆ ಶಿಂಧೆ ಬಣದ ಶಿವಸೇನೆ ಸರ್ಕಾರ ರಚನೆ ಮಾಡಿದೆ.
ಎಂವಿಎ ಸರ್ಕಾರ ವಿಧಾನಸಭೆಯಲ್ಲಿ ವಿಶ್ವಾಸಮತ ಎದುರಿಸುವ ಮುನ್ನ ರಾಜ್ಯಪಾಲರಾಗಿದ್ದ ಭಗತ್ ಸಿಂಗ್ ಕೋಶಿಯಾರಿ ಸರ್ಕಾರ ರಚನೆಗೆ ಆಹ್ವಾನ ನೀಡಿದ್ದು, ಶಿಂಧೆ ಬಣದ ಶಾಸಕರಿಗೆ ಮಾನ್ಯತೆ ನೀಡುವ ವಿಚಾರದಲ್ಲಿ ಸ್ಪೀಕರ್ ಅನುಸರಿಸಿದ ಕ್ರಮ, ಪಕ್ಷದ ವಿಪ್ ಉಲ್ಲಂಘಿಸಿದ್ದು ಸೇರಿ ಹಲವು ಅಂಶಗಳ ವಿರುದ್ಧ ಕಾನೂನಾತ್ಮಕ ಹೋರಾಟ ಸುಪ್ರೀಂಕೋರ್ಟ್‌ನಲ್ಲಿ ನಡೆದಿತ್ತು.