Advertisement

ಕೋವಿಡ್ 19 ಲಸಿಕೆ ಬೆಲೆ ರಾಜ್ಯಗಳಿಗೆ ಮತ್ತು ಕೇಂದ್ರಕ್ಕೆ ವ್ಯತ್ಯಾಸ ಯಾಕೆ? ಸುಪ್ರೀಂ ತರಾಟೆ

02:40 PM Apr 30, 2021 | Team Udayavani |

ನವದೆಹಲಿ:ದೇಶದಲ್ಲಿನ ಕೋವಿಡ್ 19 ಬಿಕ್ಕಟ್ಟಿಗೆ ಸಂಬಂಧಿಸಿದಂತೆ suo moto ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿರುವ ಸುಪ್ರೀಂಕೋರ್ಟ್ ಶುಕ್ರವಾರ(ಏಪ್ರಿಲ್ 30) ಲಾಕ್ ಡೌನ್, ರಾಜ್ಯಗಳಿಗೆ ಆಕ್ಸಿಜನ್ ಸರಬರಾಜು, ರಾಜ್ಯ ಮತ್ತು ಕೇಂದ್ರಕ್ಕೆ ಕೋವಿಡ್ ಲಸಿಕೆಯ ದರದ ಬಗ್ಗೆ ವ್ಯತ್ಯಾಸಕ್ಕೆ ಸಂಬಂಧಿಸಿದಂತೆ ಕೇಂದ್ರ ಸರಕಾರವನ್ನು ಪ್ರಶ್ನಿಸಿರುವುದಾಗಿ ವರದಿ ತಿಳಿಸಿದೆ.

Advertisement

ಇದನ್ನೂ ಓದಿ:ಪ್ರಕರಣ ಹೆಚ್ಚಾದರೆ ಕರ್ಫ್ಯೂ ಮುಂದುವರಿಕೆ ಅನಿವಾರ್ಯ: ಸಚಿವ ಕೆ.ಸುಧಾಕರ್

ಕೋವಿಡ್ ಸೋಂಕು ಪ್ರಕರಣ ದೇಶದಲ್ಲಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಆಕ್ಸಿಜನ್, ಔಷಧ ಮತ್ತು ರಾಜ್ಯ ಸರಕಾರಗಳ ನೀತಿ ನಿಯಮಗಳಿಗೆ ಸಂಬಂಧಿಸಿದ ವಿಷಯ ತಿಳಿದುಕೊಳ್ಳುವುದಾಗಿ ಕಳೆದ ವಾರ ಸುಪ್ರೀಂಕೋರ್ಟ್ ವಿಚಾರಣೆ ವೇಳೆ ತಿಳಿಸಿತ್ತು.

ಕೋವಿಡ್ ಬಿಕ್ಕಟ್ಟಿನ ವೇಳೆ ಸ್ಥಳೀಯ ಸಮಸ್ಯೆಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಕೋರಿ ಕೆಲವು ಮನವಿಗಳು ಬಂದಿರುವುದಾಗಿ ಸುಪ್ರೀಂಕೋರ್ಟ್ ನ ಜಸ್ಟೀಸ್ ಡಿವೈ ಚಂದ್ರಚೂಡ್, ಜಸ್ಟೀಸ್ ಎಲ್ ಎನ್ ರಾವ್ ಮತ್ತು ಜಸ್ಟೀಸ್ ಎಸ್ ಆರ್ ಭಟ್ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ಹೇಳಿದೆ.

ಕೋವಿಡ್ 19ಗೆ ಸಂಬಂಧಿಸಿದ ಲಸಿಕೆಯ ಬೆಲೆಗಳು ಕೇಂದ್ರ, ರಾಜ್ಯ ಸರ್ಕಾರ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ತುಂಬಾ ವ್ಯತ್ಯಾಸವಾಗಿರುವುದು ತುಂಬಾ ಖೇದಕರ ವಿಷಯವಾಗಿದೆ ಎಂದು ಪೀಠ ಅಸಮಾಧಾನವ್ಯಕ್ತಪಡಿಸಿರುವುದಾಗಿ ವರದಿ ತಿಳಿಸಿದೆ.

Advertisement

ರಾಜ್ಯ ಸರ್ಕಾರ, ಕೇಂದ್ರ ಹಾಗೂ ಖಾಸಗಿ ಆಸ್ಪತ್ರೆಗಳಿಗೆ ಕೋವಿಡ್ 19 ಲಸಿಕೆಯ ಬೆಲೆಗಳಲ್ಲಿ ವ್ಯತ್ಯಾಸವಾಗಿರುವುದು ಯಾಕೆ ಎಂಬ ಬಗ್ಗೆ ವಿವರಣೆ ನೀಡುವಂತೆ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಕೇಂದ್ರ ಸರ್ಕಾರ ಯಾಕೆ ಎಲ್ಲಾ ಲಸಿಕೆಯನ್ನು ಖರೀದಿಸಬಾರದು ಮತ್ತು ಇದನ್ನು ರಾಷ್ಟ್ರೀಯ ರೋಗನಿರೋಧಕ ಕಾರ್ಯಕ್ರಮದಡಿ ರಾಜ್ಯಗಳಿಗೆ ಹಂಚುವ ಪ್ರಕ್ರಿಯೆಗೆ ಚಾಲನೆ ನೀಡಬಾರದು ಎಂದು ಸುಪ್ರೀಂಕೋರ್ಟ್ ಕೇಂದ್ರವನ್ನು ಪ್ರಶ್ನಿಸಿದೆ.

ವಿವಿಧ ಲಸಿಕೆಗಳನ್ನು ಕೇಂದ್ರ ಸರ್ಕಾರ ರಾಷ್ಟ್ರೀಯ ರೋಗನಿರೋಧಕ ಅಭಿಯಾನವನ್ನಾಗಿ ಪರಿಗಣಿಸಿ, ದೇಶದ ಎಲ್ಲಾ ಪ್ರಜೆಗಳಿಗೂ ಉಚಿತವಾಗಿ ಲಸಿಕೆ ನೀಡುವ ಬಗ್ಗೆ ಕೇಂದ್ರ ಚಿಂತಿಸಬೇಕು ಎಂದು ಸುಪ್ರೀಂಕೋರ್ಟ್ ಅಭಿಪ್ರಾಯವ್ಯಕ್ತಪಡಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next