Advertisement

ಮಧ್ಯಪ್ರದೇಶ ರಾಜಕೀಯ ಹೈಡ್ರಾಮಾ;ಬಹುಮತ ಸಾಬೀತಿಗಾಗಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಬಿಜೆಪಿ

10:17 AM Mar 17, 2020 | Nagendra Trasi |

ನವದೆಹಲಿ: ಮಧ್ಯಪ್ರದೇಶ ವಿಧಾನಸಭೆ ಸ್ಪೀಕರ್ ಎನ್ ಪಿ ಪ್ರಜಾಪತಿ ಸೋಮವಾರ ಬಜೆಟ್ ಅಧಿವೇಶನದ ಕಲಾಪವನ್ನು ಮಾರ್ಚ್ 26ರವರೆಗೆ ಮುಂದೂಡಿದ್ದು, ಮುಖ್ಯಮಂತ್ರಿ ಕಮಲ್ ನಾಥ್ ಬಹುಮತ ಸಾಬೀತು ಪರೀಕ್ಷೆಯಿಂದ ತಾತ್ಕಾಲಿಕವಾಗಿ ನಿರಾಳತೆ ಪಡೆದಂತಾಗಿತ್ತು. ಏತನ್ಮಧ್ಯೆ ಬಿಜೆಪಿ ಸುಪ್ರೀಂಕೋರ್ಟ್ ಕದ ತಟ್ಟಿದೆ.

Advertisement

ಮಧ್ಯಪ್ರದೇಶ ವಿಧಾನಸಭೆಯಲ್ಲಿ ಎರಡು ದಿನದೊಳಗೆ ಮುಖ್ಯಮಂತ್ರಿ ಕಮಲ್ ನಾಥ್ ಬಹುಮತ ಸಾಬೀತುಪಡಿಸುವಂತೆ ನಿರ್ದೇಶನ ನೀಡಬೇಕೆಂದು ಕೋರಿ ಬಿಜೆಪಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದು, ಮಂಗಳವಾರ ಅರ್ಜಿ ವಿಚಾರಣೆ ನಡೆಸುವುದಾಗಿ ಹೇಳಿದೆ.

ರಾಜ್ಯಪಾಲರ ಆದೇಶ ಧಿಕ್ಕರಿಸಿ ಬಹುಮತ ಸಾಬೀತಿಗೆ ಅವಕಾಶ ನೀಡದೆ ಕಲಾಪ ಮುಂದೂಡಿರುವ ಸ್ಪೀಕರ್ ಪ್ರಜಾಪತಿ ಕ್ರಮದ ವಿರುದ್ಧ ಬಿಜೆಪಿ ಶಾಸಕರು ಮಧ್ಯಪ್ರದೇಶ ವಿಧಾನಸಭೆ ಹೊರಗೆ ಪ್ರತಿಭಟನೆ ನಡೆಸಿದರು.

ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಪಕ್ಷದ ಶಾಸಕರ ಜತೆ ರಾಜಭವನಕ್ಕೆ ತೆರಳಿದ್ದು, ರಾಜ್ಯಪಾಲರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಗವರ್ನರ್ ಲಾಲ್ಜಿ ಟಂಡನ್ ಅವರ ಸಮ್ಮುಖದಲ್ಲಿ ಬಿಜೆಪಿಯ ಎಲ್ಲಾ 106 ಶಾಸಕರ ಪರೇಡ್ ನಡೆಸಿ, ತಮಗೆ ಬಹುಮತ ಇದೆ ಎಂದು ಮನವರಿಕೆ ಮಾಡಿರುವುದಾಗಿ ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next