Advertisement

ಸುಪ್ರೀಂ ಮೆಟ್ಟಿಲೇರಿದ 300 ಯೋಧರು

10:31 AM Aug 15, 2018 | Team Udayavani |

ಹೊಸದಿಲ್ಲಿ: ಸಶಸ್ತ್ರ ಪಡೆಗಳ ವಿಶೇಷಾಧಿಕಾರ ಕಾಯ್ದೆ ಜಾರಿಯಲ್ಲಿರುವಂಥ ಪ್ರದೇಶದಲ್ಲಿ ಯೋಧರ ವಿರುದ್ಧ ಎಫ್ಐಆರ್‌ ದಾಖಲಾಗಿರುವುದನ್ನು ಪ್ರಶ್ನಿಸಿ 300ಕ್ಕಿಂತಲೂ ಹೆಚ್ಚು ಯೋಧರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ. ಮಂಗಳವಾರ ಅವರ ಅರ್ಜಿಯನ್ನು ಪರಿಗಣಿಸಿರುವ ನ್ಯಾಯಾಲಯ ವಿಚಾರಣೆಗೆ ಒಪ್ಪಿಗೆ ನೀಡಿದೆ. 300 ಮಂದಿ ಯೋಧರು ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಆ.20ರಂದು ನಡೆಸುವುದಾಗಿ ಕೋರ್ಟ್‌ ಹೇಳಿದೆ. ಯೋಧರ ಮೇಲೆ ಎಫ್ಐಆರ್‌ ದಾಖಲಿಸುವುದು, ವಿಚಾರಣೆ ನಡೆಸುವುದು ಕಾಯ್ದೆ ಯ ನಿಬಂಧನೆಗಳ ಉಲ್ಲಂಘನೆಯಾಗಿದೆ. ಮಣಿಪುರ ಸೇರಿದಂತೆ ಕೆಲ ಪ್ರದೇಶಗಳಲ್ಲಿ ಇಂಥ ಕೃತ್ಯಗಳು ನಡೆಯುತ್ತಿದ್ದು, ಸಶಸ್ತ್ರ ಪಡೆಗಳ ನೈತಿಕ ಸ್ಥೈರ್ಯ ಕುಂದಿ ಸುತ್ತಿವೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next