Advertisement

ತಮಿಳುನಾಡಲ್ಲಿ 5ರಂದು ಆರೆಸ್ಸೆಸ್‌ಪಥ ಸಂಚಲನ: ನಾಳೆ ಸುಪ್ರೀಂ ವಿಚಾರಣೆ

09:07 PM Mar 01, 2023 | Team Udayavani |

ನವದೆಹಲಿ: ತಮಿಳುನಾಡಿನ ಆರು ಜಿಲ್ಲೆಗಳಲ್ಲಿ ಪಂಥಸಂಚಲನ ನಡೆಸುವ ವಿಚಾರಕ್ಕೆ ಸಂಬಂಧಿಸಿದ ಪ್ರಕರಣ ಮಾ.3ರಂದು ಸುಪ್ರೀಂಕೋರ್ಟ್‌ನಲ್ಲಿ ನಡೆಯಲಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ಮತ್ತು ನ್ಯಾ.ಪಿ.ಎಸ್‌.ನರಸಿಂಹ ಅವರನ್ನೊಳಗೊಂಡ ನ್ಯಾಯಪೀಠ ಬುಧವಾರ ಈ ತೀರ್ಮಾನ ಪ್ರಕಟಿಸಿದೆ.

Advertisement

ಮಾ.5ರಂದು ಕಾರ್ಯಕ್ರಮ ನಡೆಯಲಿರುವುದರಿಂದ ತುರ್ತಾಗಿ ಪ್ರಕರಣದ ವಿಚಾರಣೆ ನಡೆಸಬೇಕು ಎಂದು ತಮಿಳುನಾಡು ಸರ್ಕಾರದ ಪರ ವಕೀಲ ಮುಕುಲ್‌ ರೋಹಟಗಿ ಮನವಿ ಮಾಡಿದ್ದಾರೆ. ಅದಕ್ಕೆ ನ್ಯಾಯಪೀಠ ಸಮ್ಮತಿಸಿತು.

ಆರ್‌ಎಸ್‌ಎಸ್‌ ಪಥಸಂಚಲನ ನಡೆಸಲು ಉದ್ದೇಶಿಸಿರುವ 6 ಜಿಲೆಗಳಲ್ಲಿ ನಿಷೇಧಿತ ಪಿಎಫ್ಐ ಸಕ್ರಿಯವಾಗಿದೆ. ಇಂತಹ ಸಂದರ್ಭದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನದಿಂದ ಕಾನೂನು ಸುವ್ಯವಸ್ಥೆಗೆ ಭಂಗವುಂಟಾಗಲಿದೆ ಎಂದು ಅನುಮತಿ ನೀಡಿರಲಿಲ್ಲ ಎಂದು ರೋಹಟಗಿ ವಾದಿಸಿದರು. ಮದ್ರಾಸ್‌ ಹೈಕೋರ್ಟ್‌ ಕೂಡ ಇದೇ ಕಾರಣದಿಂದ ಒಪ್ಪಿರಲಿಲ್ಲ ಎಂದು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next