Advertisement

Article 370 ವಿಧಿ ರದ್ದು ಪ್ರಶ್ನಿಸಿದ ಅರ್ಜಿ ಜು.11ಕ್ಕೆ ವಿಚಾರಣೆ

12:23 AM Jul 04, 2023 | Team Udayavani |

ಹೊಸದಿಲ್ಲಿ: 370ನೇ ವಿಧಿ ಅನ್ವಯ ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಜು. 11ರಂದು ಸುಪ್ರೀಂ ಕೋರ್ಟ್‌ನ ಪಂಚಸದಸ್ಯ ಸಂವಿಧಾನ ಪೀಠವು ವಿಚಾರಣೆ ನಡೆಸಲಿದೆ.

Advertisement

ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ಅವರ ನೇತೃತ್ವದಲ್ಲಿ, ನ್ಯಾಯಮೂರ್ತಿ ಸಂಜಯ್‌ ಕಿಶನ್‌ ಕೌಲ್‌, ನ್ಯಾ| ಸಂಜೀವ್‌ ಖನ್ನಾ, ನ್ಯಾ. ಬಿ.ಆರ್‌.ಗವಾಯಿ, ನ್ಯಾ| ಸೂರ್ಯಕಾಂತ್‌ ಅವರನ್ನೊಳಗೊಂಡ ಪೀಠ ಅರ್ಜಿಗಳನ್ನು ಆಲಿಸಲಿದೆ. ಸಲ್ಲಿಕೆಯಾಗಿರುವ ಅರ್ಜಿಗಳ ಪೈಕಿ ಭಾರತೀಯ ಆಡಳಿತ ಸೇವೆ (ಐಎಎಸ್‌) ಅಧಿಕಾರಿ ಶಾ ಫೈಸಲ್‌ ಅವರ ಅರ್ಜಿಯೂ ಒಂದಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

2019ರ ಆಗಸ್ಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರವು 370ನೇ ವಿಧಿ ರದ್ದುಗೊಳಿಸುವ ಮೂಲಕ ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ತೆಗದುಹಾಕಿತ್ತು. ಬಳಿಕ ಜಮ್ಮು-ಕಾಶ್ಮೀರ ಹಾಗೂ ಲಡಾಖ್‌ ಅನ್ನು ಕೇಂದ್ರಾಡಳಿತ ಪ್ರದೇಶಗಳೆಂದು ಘೋಷಿಸಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next