Advertisement

ಅನರ್ಹತೆ: ಇಂದು ತೀರ್ಪು?

08:30 AM Sep 25, 2018 | Team Udayavani |

ಹೊಸದಿಲ್ಲಿ: ಅಪರಾಧ ಪ್ರಕರಣಗಳಲ್ಲಿ ಆರೋಪ ಹೊತ್ತ ಶಾಸಕರು ಅಥವಾ ಸಂಸದರನ್ನು ಆರೋಪ ಸಾಬೀತಾಗುವ ಮೊದಲೇ ಅವರನ್ನು ಆ ಸಾಂವಿಧಾನಿಕ ಹುದ್ದೆಗಳಿಂದ ಅನರ್ಹಗೊಳಿಸಬೇಕೇ, ಬೇಡವೇ ಎಂಬುದರ ಬಗ್ಗೆ ಸುಪ್ರೀಂ ಕೋರ್ಟ್‌, ಮಂಗಳವಾರ ಮಹತ್ವದ ತೀರ್ಪು ನೀಡುವ ನಿರೀಕ್ಷೆಯಿದೆ. ಆರೋಪ ಹೊತ್ತ ರಾಜಕಾರಣಿಗಳು ಶಾಸಕರಾಗಿ, ಸಂಸದರಾಗಿ ಮುಂದುವರಿಯಲು ಅವಕಾಶ ಕೊಡಬಾರದೆಂದು ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳಿಗೆ ಮಂಗಳವಾರ ಉತ್ತರ ಸಿಗಲಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next