ನೀಡಿದ್ದ ಆದೇಶವು ಮಹಿಳಾ ಹಕ್ಕುಗಳಿಗೆ ವಿರುದ್ಧವಾಗಿರುವುದರಿಂದ ಈ ಆದೇಶವನ್ನು ಮರುಪರಿಶೀಲಿಸುವುದಾಗಿ ಸುಪ್ರೀಂಕೋರ್ಟ್ ಶುಕ್ರವಾರ ತಿಳಿಸಿದೆ.
Advertisement
ಸುಪ್ರೀಂ ಕೋರ್ಟ್ ಜು. 27ರಂದು ನೀಡಿದ್ದ ಆದೇಶದಲ್ಲಿ ವರದಕ್ಷಿಣೆ ಕಿರುಕುಳ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಹೊಸ ಮಾರ್ಗಸೂಚಿಯನ್ನು ಸಿದ್ಧಪಡಿಸಿ ವರದಕ್ಷಿಣೆ ಕಿರುಕುಳ ಪ್ರಕರಣಗಳಿಗೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸುವುದಕ್ಕೂ ಮುನ್ನ ಪೊಲೀಸರು ಪ್ರಕರಣವನ್ನು ಸಮಿತಿಯಿಂದ ಪರಿಶೀಲನೆಗೊಳಪಡಿಸಬೇಕು ಎಂದು ನಿರ್ದೇಶ ನೀಡಿತ್ತು. ಆದರೆ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಾಧೀಶರ ನೇತೃತ್ವದ ಮೂವರು ಸದಸ್ಯರ ಪೀಠ ಈ ಆದೇಶ ಮಹಿಳಾ ಹಕ್ಕುಗಳಿಗೆ ವಿರುದ್ಧವಾಗಿದೆ ಎಂದು ಅಭಿಪ್ರಾಯಪಟ್ಟಿತಲ್ಲದೆ ಅದನ್ನು ಪುನರ್ ಪರಿಶೀಲಿಸುವ ನಿರ್ಧಾರವನ್ನು ಪ್ರಕಟಿಸಿತು.