ಹೊಸದಿಲ್ಲಿ: ಮುಂದಿನ ಮೂರು ತಿಂಗಳಲ್ಲಿ ಸುಪ್ರೀಂ ಕೋರ್ಟ್, ಮೂವರು ಮುಖ್ಯ ನ್ಯಾಯಮೂರ್ತಿಗಳನ್ನು ಕಾಣಲಿದೆ!
ಹಾಲಿ ಮುಖ್ಯ ನ್ಯಾಯಮೂರ್ತಿಗಳಾದ ಎನ್.ವಿ. ರಮಣ, ಆ. 16ರಂದು ನಿವೃತ್ತಿಯಾಗಲಿದ್ದಾರೆ.
ಅವರ ಸ್ಥಾನಕ್ಕೆ ಅದೇ ದಿನ ನ್ಯಾ. ಯು.ಯು. ಲಲಿತ್ ಅವರು ಸುಪ್ರೀಂ ಕೋರ್ಟ್‌ನ ನೂತನ ಮುಖ್ಯ ನ್ಯಾಯ ಮೂರ್ತಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.
ಇದನ್ನೂ ಓದಿ:ಕೊಡಗಿನ ಜಲಪಾತದಲ್ಲಿ ಈಜಲು ಹೋದ ಇಬ್ಬರು ಯುವಕರು ನೀರುಪಾಲು
ಅವರ ಅಧಿಕಾರಾವಧಿ ನ. 8ರಂದು ಮುಕ್ತಾಯಗೊಳ್ಳಲಿದ್ದು, ಅನಂತರ ಆ ಸ್ಥಾನಕ್ಕೆ ಬರಲಿರುವ ನ್ಯಾ| ಡಿ.ವೈ. ಚಂದ್ರಚೂಡ್ ಅವರು ಮುಂದಿನ ಎರಡು ವರ್ಷಗಳ ಕಾಲ ಸಿಜೆಐ ಆಗಿ ಅಧಿಕಾರದಲ್ಲಿರಲಿದ್ದಾರೆ.
ಅಲ್ಲಿಗೆ, 2022ರ ಆ. 16ರಿಂದ ನ. 16ರವರೆಗಿನ ಮೂರು ತಿಂಗಳ ಅವಧಿಯಲ್ಲಿ ಮೂವರು ಪ್ರತ್ಯೇಕ ನ್ಯಾಯಮೂರ್ತಿಗಳು ನೇಮಕಗೊಂಡಂತಾಗುತ್ತದೆ.