ನವದೆಹಲಿ: ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಕೇಂದ್ರೀಯ ವಿದ್ಯಾಲಯಗಳಿಗೆ ಪ್ರವೇಶ ಪಡೆಯುವ ಮಕ್ಕಳ ವಯೋಮಿತಿಯನ್ನು 5ರಿಂದ 6 ವರ್ಷಕ್ಕೇರಿಸಬೇಕು ಎಂಬ ದೆಹಲಿ ಹೈಕೋರ್ಟ್ ಆದೇಶವನ್ನು ಸುಪ್ರೀಂಕೋರ್ಟ್ ಪುರಸ್ಕರಿಸಿದೆ.
ಹೈಕೋರ್ಟ್ ಆದೇಶ ಪ್ರಶ್ನಿಸಿ ಕೆಲವು ಹೆತ್ತವರು ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ.
ರಜಾ ಕಾಲದ ವಿಶೇಷ ಅರ್ಜಿಯನ್ನು ತಿರಸ್ಕರಿಸಿದ ನ್ಯಾಯಪೀಠ “ಇತರ ಅರ್ಜಿದಾರರು ವಿಭಾಗೀಯ ಪೀಠಕ್ಕೂ ಮೇಲ್ಮನವಿ ಸಲ್ಲಿಸಿದ್ದರು. ಅದನ್ನೂ ಏ.13ರಂದು ತಿರಸ್ಕರಿಸಲಾಗಿತ್ತು’ ಎಂದಿದೆ.
ಏಕ ಸದಸ್ಯ ಪೀಠ ವಯೋಮಿತಿಯ ನಿರ್ಧಾರದ ಬಗ್ಗೆ ಯಾವ ಅಭಿಪ್ರಾಯ ಹೊಂದಿತ್ತೋ, ಅದನ್ನೇ ಸುಪ್ರೀಂಕೋರ್ಟ್‌ನ ಹಾಲಿ ನ್ಯಾಯಪೀಠ ಹೊಂದಿದೆ’ ಎಂದು ಹೇಳಿ ಅರ್ಜಿಗಳನ್ನು ತಿರಸ್ಕರಿಸಿತು.