ನವದೆಹಲಿ: ಕರ್ನಾಟಕದ ಹಿಜಾಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಸೋಮವಾರ (ಆಗಸ್ಟ್ 29) ಕರ್ನಾಟಕ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಇದನ್ನೂ ಓದಿ:ಸೆಪ್ಟೆಂಬರ್ -ಅಕ್ಟೋಬರ್ ತಿಂಗಳಲ್ಲಿ ರಾಜ್ಯದ ಆರು ಕಡೆಗಳಲ್ಲಿ ದೊಡ್ಡ ರ‍್ಯಾಲಿ: ಸಿಎಂ
ಮತ್ತೊಂದೆಡೆ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಿರುವ ಕರ್ನಾಟಕ ಹೈಕೋರ್ಟ್ ಆದೇಶವನ್ನು ಎತ್ತಿಹಿಡಿದಿರುವ ಸುಪ್ರೀಂಕೋರ್ಟ್ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 5ಕ್ಕೆ ನಿಗದಿಪಡಿಸಿದೆ.
ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರನ್ನೊಳಗೊಂಡ ಪೀಠವು, ಕರ್ನಾಟಕ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡುವ ಸಂದರ್ಭದಲ್ಲಿ ಶೀಘ್ರವೇ ವಿಚಾರಣೆ ನಡೆಸಬೇಕೆಂದು ಕೋರಿದ್ದ ಅರ್ಜಿಯನ್ನು ಮುಂದೂಡಬೇಕೆಂಬ ಮನವಿಯನ್ನು ಸ್ವೀಕರಿಸುವುದಿಲ್ಲ ಎಂದು ಹೇಳಿದೆ.
ವಿಚಾರಣೆಯನ್ನು ಮುಂದೂಡಬೇಕೆಂದು ಕೋರಿದ್ದ ಕೆಲವು ಅರ್ಜಿದಾರರನ್ನು ಸುಪ್ರೀಂಕೋರ್ಟ್ ತರಾಟೆಗೆ ತೆಗೆದುಕೊಂಡಿದ್ದು, ಇಂತಹ ಫೋರಂ ಶಾಪಿಂಗ್ ಗೆ ಅವಕಾಶ ನೀಡುವುದಿಲ್ಲ ಎಂದು ಚಾಟಿ ಬೀಸಿದೆ.