Advertisement

ನಾಳೆಯೇ ವಿಶ್ವಾಸಮತ ಯಾಚನೆ: ಮಹತ್ವದ ತೀರ್ಪು ನೀಡಿದ ಕೋರ್ಟ್

04:08 PM Dec 02, 2019 | Team Udayavani |

ಹೊಸದಿಲ್ಲಿ: ಮಹಾರಾಷ್ಟ್ರ ಸರಕಾರ ರಚನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನ ತ್ರಿ ಸದಸ್ಯ ಪೀಠ ಮಹತ್ವದ ತೀರ್ಪು ನೀಡಿದ್ದು, ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ನಾಳೆಯೇ ಬಹುಮತ ಸಾಬೀತು ಮಾಡಬೇಕು ಎಂದಿದೆ.

Advertisement

ನಾಳೆ ಸಂಜೆ 5 ಗಂಟೆಯೊಳಗೆ ಬಹುಮತ ಸಾಬೀತು ಮಾಡಬೇಕು. ಗುಪ್ತ ಮತದಾನಕ್ಕೆ ಅವಕಾಶ ನೀಡಬಾರದು. ವಿಶ್ವಾಸ ಮತ ಯಾಚನೆಯನ್ನು ನೇರಪ್ರಸಾರ ಮಾಡಬೇಕು ಎಂದು ಕೋರ್ಟ್ ಹೇಳಿದೆ.

ಶಾಸಕರ ಪ್ರಮಾಣ ವಚನವನ್ನು ಬೆಳಿಗ್ಗೆಯಿಂದ ಸಂಜೆ ಐದು ಗಂಟೆಯೊಳಗೆ ನಡೆಸಬೇಕು. ನಂತರ ವಿಶ್ವಾಸ ಮತ ಯಾಚನೆ ಪ್ರಕ್ರಿಯೆಯನ್ನು ನಡೆಸಬೇಕು ಎಂದು ಕೋರ್ಟ್ ಹೇಳಿದೆ.

ಸರಕಾರ ರಚನೆಗೆ ಬಿಜೆಪಿಗೆ ಅವಕಾಶ ನೀಡಿದ ರಾಜ್ಯಪಾಲರ ಕ್ರಮವನ್ನು ಪ್ರಶ್ನಿಸಿ ಶಿವಸೇನೆ- ಎನ್ ಸಿಪಿ- ಕಾಂಗ್ರೆಸ್ ಪಕ್ಷಗಳು ಸುಪ್ರೀಂ ಮೆಟ್ಟಿಲೇರಿದ್ದವು.

ನ್ಯಾ. ಎನ್ ವಿ ರಮಣ, ನ್ಯಾ. ಅಶೋಕ್ ಭೂಷಣ್, ನ್ಯಾ. ಸಂಜೀವ್ ಖನ್ನಾ ಅವರನ್ನೊಳಗೊಂಡ ಪೀಠ ರವಿವಾರ ಮತ್ತು ಸೋಮವಾರ ವಿಚಾರಣೆ ನಡೆಸಿ ಅಂತಿಮ ತೀರ್ಪನ್ನು ಇಂದಿಗೆ ಮುಂದೂಡಿತ್ತು.

Advertisement
Advertisement

Udayavani is now on Telegram. Click here to join our channel and stay updated with the latest news.

Next