Advertisement

ಅಧಿಕಾರ ವ್ಯಾಪ್ತಿ ಬಗ್ಗೆ ಸುಪ್ರೀಂ ದ್ವಂದ್ವ ತೀರ್ಪು

12:30 AM Feb 15, 2019 | |

ಹೊಸದಿಲ್ಲಿ: ಕೇಂದ್ರ ಸರಕಾರ ಹಾಗೂ ದಿಲ್ಲಿ ಸರಕಾರವು ಯಾವ ಯಾವ ಕ್ಷೇತ್ರದಲ್ಲಿ ಅಧಿಕಾರ ಹೊಂದಿವೆ ಎಂಬುದಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ದ್ವಂದ್ವ ತೀರ್ಪು ನೀಡಿದ್ದು, ಪ್ರಕರಣವನ್ನು ವಿಸ್ತೃತ ನ್ಯಾಯಪೀಠಕ್ಕೆ ವರ್ಗಾಯಿಸಿದೆ. ಇತರೆ ಕೆಲವು ವಿಷಯಗಳಲ್ಲಿ ನ್ಯಾ.ಎ.ಕೆ.ಸಿಕ್ರಿ ಮತ್ತು ಅಶೋಕ್‌ ಭೂಷಣ್‌ ಸಹಮತ ಹೊಂದಿದ್ದಾರೆ. ದಿಲ್ಲಿಯ ಭ್ರಷ್ಟಾಚಾರ ನಿಗ್ರಹ ದಳವು ಕೇಂದ್ರ ಸರಕಾರದ ಅಧಿಕಾರಿಗಳನ್ನು ತನಿಖೆ ನಡೆಸುವಂತಿಲ್ಲ.  ಕಾನೂನು ಅಧಿಕಾರಿಗಳನ್ನು ಅಥವಾ ಪಬ್ಲಿಕ್‌ ಪ್ರಾಸಿಕ್ಯೂಟರ್‌ ನೇಮಕಕ್ಕೆ ಲೆಫ್ಟಿನೆಂಟ್‌ ಗವರ್ನರ್‌ ಬದಲಿಗೆ ದಿಲ್ಲಿ ಸರಕಾರವೇ ಅಧಿಕಾರ ಹೊಂದಿದೆ ಎಂದು ಸುಪ್ರೀಂಕೋರ್ಟ್‌ಕೋರ್ಟ್‌ ಅಭಿಪ್ರಾಯಪಟ್ಟಿದೆ.  

Advertisement

ಇದಕ್ಕೆ ಪ್ರತಿಕ್ರಿಯಿಸಿರುವ ದಿಲ್ಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌, ಸುಪ್ರೀಂಕೋರ್ಟ್‌ನ ತೀರ್ಪಿನಲ್ಲಿ ಸ್ಪಷ್ಟತೆಯಿಲ್ಲ. ದಿಲ್ಲಿ ಜನರ ಸಮಸ್ಯೆ ಪರಿಹಾರವಾಗಿಲ್ಲ ಎಂದು  ಕಿಡಿಕಾರಿದ್ದಾರೆ. ಇದು ಸಂವಿಧಾನ ಮತ್ತು ಪ್ರಜಾಪ್ರಭುತ್ವ ವಿರೋಧಿ ತೀರ್ಪು ಎಂದಿದ್ದಾರೆ. ಆದರೆ, ಬಿಜೆಪಿ ಈ ತೀರ್ಪನ್ನು ಸ್ವಾಗತಿಸಿದೆ. 

Advertisement

Udayavani is now on Telegram. Click here to join our channel and stay updated with the latest news.

Next