ತನ್ನ ಕಾರ್ಯ ಚಟುವಟಿಕೆಗಳ ಬಗ್ಗೆ ಸುಪ್ರೀಂಕೋರ್ಟ್ ಪ್ರತಿ ತಿಂಗಳು ಸುದ್ದಿಪತ್ರ (ನ್ಯೂಸ್ ಲೆಟರ್) ಮೂಲಕ ಮಾಹಿತಿ ನೀಡಲಿದೆ. ಶುಕ್ರವಾರ ನವದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರು ಮೊದಲ ಆವೃತ್ತಿಯನ್ನು ಲೋಕಾರ್ಪಣೆ ಮಾಡಿದ್ದಾರೆ. ಪ್ರಮುಖ ತೀರ್ಪುಗಳು, ನ್ಯಾಯಾಂಗ ಕ್ಷೇತ್ರದಲ್ಲಿನ ಸಾಧನೆಗಳು, ಸುಪ್ರೀಂಕೋರ್ಟ್ ಇತಿಹಾಸ ಸೇರಿದಂತೆ ಪ್ರಮುಖ ಮಾಹಿತಿಗಳು ಅದರಲ್ಲಿ ಒಳಗೊಳ್ಳಲಿವೆ ಎಂದು ಹೇಳಿದ್ದಾರೆ.
Advertisement