Advertisement

Suraj Revanna ಸತ್ಯ ಹೆಚ್ಚು ದಿನ ಮುಚ್ಚಿಡಲು ಸಾಧ್ಯವಿಲ್ಲ

11:57 PM Jul 26, 2024 | Team Udayavani |

ಮೈಸೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಬಂದಿರುವ ವಿಧಾನ ಪರಿಷತ್‌ ಸದಸ್ಯ ಸೂರಜ್‌ ರೇವಣ್ಣ, ಶುಕ್ರವಾರ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡೇಶ್ವರಿಯ ದರ್ಶನ ಪಡೆದರು.

Advertisement

ಆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರತಿ ವರ್ಷ ಆಷಾಢದಲ್ಲಿ ತಾಯಿಯ ದರ್ಶನ ಪಡೆಯುವುದು ಸಂಪದ್ರಾಯ. ಅದರಂತೆ ಬೆಟ್ಟಕ್ಕೆ ಆಗಮಿಸಿ ತಾಯಿಯ ದರ್ಶನ ಪಡೆದಿದ್ದೇನೆ ಎಂದರು.

ತಮ್ಮ ವಿರುದ್ಧದ ಆರೋಪಗಳ ಕುರಿತಂತೆ ಪ್ರತಿಕ್ರಿಯಿಸಿ, ನಾನು ಯಾವುದೇ ತಪ್ಪು ಮಾಡಿಲ್ಲ. ಅದಕ್ಕೆ ಇಷ್ಟು ಧೈರ್ಯವಾಗಿದ್ದೇನೆ. ಎಲ್ಲದಕ್ಕೂ ಕಾಲವೇ ಉತ್ತರ ಕೊಡುತ್ತದೆ. ಸತ್ಯವನ್ನು ಹೆಚ್ಚು ದಿನ ಮುಚ್ಚಿಡಲು ಸಾಧ್ಯವಿಲ್ಲ. ಯಾರ್ಯಾರು ಷಡ್ಯಂತ್ರದಲ್ಲಿ ಭಾಗಿಯಾಗಿದ್ದಾ ರೆಯೋ ಅವರೆಲ್ಲರೂ ಹೊರ ಬರುತ್ತಾರೆ ಎಂದು ಹೇಳಿದರು.

 

Advertisement

Udayavani is now on Telegram. Click here to join our channel and stay updated with the latest news.

Next