Advertisement
ಈ ಕುರಿತು ತಹಶೀಲ್ದಾರ್ ನಿಂಗಣ್ಣ ಬಿರಾದಾರ ಮತ್ತು ಶಾಸಕ ರಾಜೂಗೌಡ ಅವರಿಗೆ ಮನವಿ ಸಲ್ಲಿಸಿದ ಸಮಿತಿ ಜಿಲ್ಲಾ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ ಮಾತನಾಡಿ, ಕೊಲೆ ಘಟನೆ ಕರಿತು ಉನ್ನತ ಮಟ್ಟದ ತನಿಖೆ ಮಾಡಿಸಿ ನಿಜವಾದ ಕೊಲೆಗಾರರನ್ನು ಪತ್ತೆ ಹಚ್ಚ ಬೇಕು ನಿರಾಪರಾಧಿಯಾಗಿರುವ ಯುವಕ ಮತ್ತು ಆತನ ಮನೆಯವರನ್ನು ಬಿಡುಗಡೆ ಮಾಡಬೇಕು. ನಮ್ಮ ಮನವಿಗೆ ಸ್ಪಂದಿಸದಿದ್ದಲ್ಲಿ ಮೇ27ರಂದು ಯುವಕನ ಕುಟುಂಬದವರೊಂದಿಗೆ ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಎದುರು ಅಮರಣಾಂತ ಉಪವಾಸ ಧರಣಿ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು. ಪ್ರಮುಖರಾದ ಮಾನಪ್ಪ ಬಿಜಾಸ್ಪೂರ, ಮಹೇಶ ಯಾದಗಿರಿ, ತಿಪ್ಪಣ್ಣ, ಮಾನಪ್ಪ ಶೆಳ್ಳಗಿ, ಜೆಟ್ಟೆಪ್ಪ ನಾಗರಾಳ ಇದ್ದರು.