Advertisement
ಯೋಜನೆ ಅನುಷ್ಠಾನಕ್ಕೆ ರೈತರಿಂದ ಸಮಗ್ರ ಮಾಹಿತಿ ಸಂಗ್ರಹಿಸಿ ಆನ್‌ಲೈನ್‌ನಲ್ಲಿ ದಾಖಲಿಸುವಂತೆ ಸೂಚಿಸಲಾಗಿತ್ತು. ಕೃಷಿ, ಕಂದಾಯ, ತಾಪಂ, ಪಿಡಿಒ, ಕಾರ್ಯದರ್ಶಿ ಸೇರಿದಂತೆ ಇತರೆ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಜು. 20ರಿಂದ ಕಾರ್ಯ ಯೋಜನೆ ಆರಂಭವಾಗಿದ್ದು, ಹುಣಸಗಿ-ಸುರಪುರ ಸೇರಿ ಒಟ್ಟು 1,50,910 ರೈತ ಕುಟುಂಬಗಳನ್ನು ಯೋಜನೆಗೆ ಗುರುತಿಸಲಾಗಿದೆ.
Related Articles
Advertisement
ಮಾಹಿತಿ ಕೊರತೆ: ಮಹತ್ವಕಾಂಕ್ಷಿ ಯೋಜನೆ ಕುರಿತು ರೈತರಿಗೆ ಮಾಹಿತಿ ಒದಗಿಸುವಲ್ಲಿ ಜಿಲ್ಲಾ ಮತ್ತು ತಾಲೂಕು ಆಡಳಿತ ವಿಫಲವಾಗಿದೆ. ಈ ಕುರಿತು ಒಂದು ಬಾರಿಯೂ ಜಾಗೃತಿ ಕಾರ್ಯಕ್ರಮ ಆಯೋಜಿಸಲಿಲ್ಲ. ಸರಿಯಾದ ಮಾಹಿತಿ ನೀಡಲಿಲ್ಲ. ಫಸಲ್ ಬಿಮಾ ಯೋಜನೆಯಂತೆ ಇದು ಕೂಡ ಇರಬಹುದು ಎಂದು ಭಾವಿಸದ ರೈತರು ಯೋಜನೆಗೆ ಆಸಕ್ತಿ ತೋರಿಲ್ಲ ಎಂಬು ಹೇಳಲಾಗುತ್ತಿದೆ.
ಜಾಗೃತಿಗೆ ಒತ್ತು: ಯೋಜನೆ ಕುರಿತು ರೈತರಿಗೆ ಮಾಹಿತಿ ತಲುಪಿಸಲು ಪ್ರತಿ ಗ್ರಾಮಗಳಲ್ಲಿ ಡಂಗುರ ಹಾಕಿಸಬೇಕು. ಪ್ರತಿ ಹಳ್ಳಿಗೆ ಹೋಗಿ ಬೆಳಗಿನಿಂದ ಸಂಜೆವರೆಗೆ ಗ್ರಾಮದಲ್ಲಿ ಕುಳಿತು ಪ್ರತಿ ರೈತರಿಂದ ಮಾಹಿತಿ ಸಂಗ್ರಹಿಸಬೇಕು. ಯಾವೊಬ್ಬ ರೈತ ಯೋಜನೆಯಿಂದ ವಂಚಿತರಾಗದಂತೆ ಎಚ್ಚರಿಕೆ ವಹಿಸಬೇಕು. ಹಗಲು ರಾತ್ರಿ ಶ್ರಮವಹಿಸಿ ಕೆಲಸ ಮಾಡಬೇಕು ಎಂದು ಜಿಲ್ಲಾಡಳಿತ ಕಟ್ಟುನಿಟ್ಟಾಗಿ ಸೂಚಿಸಿದೆ.
ಯೋಜನೆ ಲಾಭ ಪಡೆಯಲು ರೈತರು ಆಧಾರ್ ನಂಬರ್, ಬ್ಯಾಂಕ್ ಪಾಸ್‌ಬುಕ್ ಮತ್ತಿತರೆ ದಾಖಲಾತಿ ನೀಡಬೇಕಾಗಿದೆ. ಆದರೆ, ಈ ಬಗ್ಗೆ ಸರಿಯಾದ ಮಾಹಿತಿ ಸಿಗದೆ ರೈತರಲ್ಲಿ ಹಲವು ರೀತಿಯ ಗೊಂದಲಗಳು ಸೃಷ್ಟಿಯಾಗಿವೆ. ಪಹಣಿ ಸರಿಯಿದ್ದರೆ, ಆಧಾರ್ ಸರಿ ಇಲ್ಲ. ಎರಡು ಸರಿಯಿದ್ದರೆ ಬ್ಯಾಂಕ್ ಖಾತೆಗೆ ಹೊಂದಾಣಿಕೆಯಾಗುತ್ತಿಲ್ಲ. ಹೀಗಾಗಿ ಮಾಹಿತಿ ಅಪ್‌ಲೋಡ್ ದೊಡ್ಡ ತಲೆನೋವಾಗಿ ಪರಿಣಮಿಸಿದೆ ಎನ್ನುವುದು ಅಧಿಕಾರಿಗಳ ದೂರು.
ಪಹಣಿ ಪತ್ರಿಕೆಯಲ್ಲಿ ಹೆಸರಿರುವ ಪ್ರತಿಯೊಬ್ಬರು ಯೋಜನೆಗೆ ಒಳಪಡುತ್ತಾರೆ. ಹೆಸರಿದ್ದ ವ್ಯಕ್ತಿ ಮೃತಪಟ್ಟಿದ್ದರೆ ಅವರ ಪತ್ನಿ. ಅವರು ಮೃತಪಟ್ಟಲ್ಲಿ ಮಕ್ಕಳ ದಾಖಲೆ ಪಡೆದುಕೊಳ್ಳಲಾಗುತ್ತದೆ. ಈಗಾಗಲೇ ಶೇ.60ರಷ್ಟು ಮಾಹಿತಿ ಸಂಗ್ರಹಿಸಲಾಗಿದೆ. ಉಳಿದ ಮಾಹಿತಿ ಸಂಗ್ರಹ ಕಾರ್ಯ ನಡೆದಿದೆ. ಹಗಲು ರಾತ್ರಿ ಶ್ರಮವಹಿಸಿ ಕೆಲಸ ಮಾಡುತ್ತೇವೆ.•ಗುರುಬಸಪ್ಪ,
ಕಂದಾಯ ನಿರೀಕ್ಷಕ ಜಿಲ್ಲಾಧಿಕಾರಿಗಳ ಸೂಚನೆ ಮೇರಿಗೆ ಸಮಾರೋಪಾದಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದೇವೆ. ಗ್ರಾಮಗಳಲ್ಲಿ ಡಂಗುರು ಹಾಕಿಸಿ ಜಾಗೃತಿ ಮೂಡಿಸಲಾಗಿದೆ. ಕ್ಷಣಕ್ಷಣಕ್ಕೂ ಮಾಹಿತಿ ಪಡೆಯುತ್ತಿದ್ದೇನೆ. ದಾಖಲೆ ನೀಡಲು ರೈತರು ಉತ್ಸಹದಿಂದ ಮುಂದೆ ಬರುತ್ತಿದ್ದಾರೆ. ನಿಗದಿತ ಅವಧಿಯೊಳಗೆ ಗುರಿ ತಲುಪುವ ವಿಶ್ವಾಸವಿದೆ.
•ಸುರೇಶ ಅಂಕಲಗಿ,ತಹಶೀಲ್ದಾರ್ ನಿಯೋಜಿತ ಎಲ್ಲ ಅಧಿಕಾರಿಗಳು ಸಮರ್ಪಕವಾಗಿ ಕೆಲಸ ಮಾಡುತ್ತಿದ್ದಾರೆ. ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುವ ಕಾರ್ಯ ಭರದಿಂದ ನಡೆಯುತ್ತಿದೆ. ಎನ್‌ಎ, ಸರಕಾರಿ ಭೂಮಿ, ಗೈರಾಣ, ಗಾಂವಠಾಣಾ, ಜನಪ್ರತಿನಿಧಿಗಳು ಸೇರಿದಂತೆ ಯೋಜನೆಯಿಂದ ಹೊರತುಪಡಿಸಲಾದ ಮಾಹಿತಿ ತೆಗೆದುಹಾಕುವ ಕೆಲಸ ನಡೆದಿದೆ. ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಪ್ರತಿಶತ ಗುರಿ ಸಾಧಿಸಲು ಎಲ್ಲ ರೀತಿಯ ಪ್ರಯತ್ನ ಮಾಡುತ್ತಿದ್ದೇವೆ.
•ಮಹಾದೇವಪ್ಪ, ಸಹಾಯಕ ಕೃಷಿ ನಿರ್ದೇಶಕರು.