Advertisement
ಇಲ್ಲಿಯ ನಗರಸಭೆ ಕಚೇರಿಯಲ್ಲಿ ಶುಕ್ರವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಸುರಪುರ, ಕಕ್ಕೇರಾ, ಕೆಂಭಾವಿ ಮತ್ತು ಶಹಾಪುರ ನಗರಸಭೆ ವ್ಯಾಪ್ತಿಯ ನಗರೋತ್ಥಾನ ಯೋಜನೆಯಡಿ ನಡೆಯುತ್ತಿರುವ ವಿವಿಧ ಕಾಮಗಾರಿ ನಿಧಾನಗತಿಯಲ್ಲಿ ನಡೆಯುತ್ತಿವೆ. ಕಾಮಗಾರಿ ವೇಗ ಹೆಚ್ಚಿಸಿ ತ್ವರಿತವಾಗಿ ಕಾಮಗಾರಿ ಮುಗಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
Related Articles
Advertisement
ಬಯೋಮೆಟ್ರಿಕ್ ಯಂತ್ರ ಅಳವಡಿಕೆಯಿಂದ ಆಡಳಿತ ವ್ಯವಸ್ಥೆ ಮತ್ತಷ್ಟು ಸುಧಾರಣೆಯಾಗುತ್ತದೆ. ನಗರಸಭೆಯಲ್ಲಿ ಅನೇಕ ವರ್ಷಗಳಿಂದ ಮಳಿಗೆಗಳ ಹಾರಾಜು ಆಗಿಲ್ಲ. ಕಾರಣ ಆ ಪ್ರಕ್ರಿಯೆ ಮುಗಿಸುವಂತೆ ತಿಳಿಸಿದ್ದೇನೆ. ನೀರು, ಮನೆ ಕರ ವಸೂಲಿ ವೇಗ ಹೆಚ್ಚಿಸುವಂತೆ ಸೂಚಿಸಿದ್ದೇನೆ. ಇದರಿಂದ ನಗರಸಭೆ ಆದಾಯ ವೃದ್ಧಿಯಾಗುತ್ತದೆ ಎಂದರು.
ನಗರಸಭೆಯಲ್ಲಿ ವಿವಿಧ ವಸತಿ ಯೋಜನೆ ಅಡಿಯಲ್ಲಿ ಮಂಜೂರಾದ ಮನೆಗಳಿಗೆ ತಕ್ಷಣ ಜಿಪಿಆರ್‌ಎಸ್ ಮಾಡಲು ಕ್ರಮ ಕೈಗೊಳ್ಳಬೇಕು. ಯಾವುದೇ ದೂರು ಬರಕೂಡದು ಎಂದು ಖಡಕ್ ಎಚ್ಚರಿಕೆ ನೀಡಿದರು.
ಸಹಾಯಕ ಆಯುಕ್ತ ಶಂಕರಗೌಡ ಸೋಮನಾಳ, ತಹಶೀಲ್ದಾರ್ ಸುರೇಶ ಅಂಕಲಗಿ ಸೇರಿದಂತೆ ಯಾದಗಿರಿ ನಗರಕೋಶದ ಮತ್ತು ಸುರಪುರ ನಗರಸಭೆ ಅಧಿಕಾರಿಗಳು, ಇಂಜಿನಿಯರ್‌ಗಳು ಇದ್ದರು.