Advertisement

ಜ್ಞಾನ ವಿಕಾಸಕ್ಕೆ ಗ್ರಂಥಾಲಯ ಪೂರಕ

02:40 PM Oct 20, 2019 | Team Udayavani |

ಸುರಪುರ: ಶಿಕ್ಷಣದಿಂದ ಸಮಾಜ ಅಭಿವೃದ್ಧಿ ಹೊಂದಲು ಸಾಧ್ಯ. ಈ ನಿಟ್ಟಿನಲ್ಲಿ ಯುವ ಸಮುದಾಯದ ಜ್ಞಾನ ವಿಕಾಸಗೊಳ್ಳಲು ಪುಸ್ತಕಗಳು ಅಗತ್ಯವಾಗಿದ್ದು, ಗ್ರಂಥಾಲಯಗಳಲ್ಲಿನ ಪುಸ್ತಕಗಳು ಇದಕ್ಕೆ ಪೂರಕವಾಗಿ ಕೆಲಸ ಮಾಡುತ್ತವೆ ಎಂದು ಶಾಸಕ ನರಸಿಂಹ ನಾಯಕ (ರಾಜುಗೌಡ) ಹೇಳಿದರು.

Advertisement

ತಾಲೂಕಿನ ವಾಗಣಗೇರಿ ಗ್ರಾಮದಲ್ಲಿ 25 ಲಕ್ಷ ರೂ. ವೆಚ್ಚದ ಸಾರ್ವಜನಿಕ ಗ್ರಂಥಾಲಯ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಹೈದ್ರಾಬಾದ್‌ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅನುದಾನದಡಿ ಹೈಟೆಕ್‌ ಗ್ರಂಥಾಲಯ ನಿರ್ಮಿಸಲಾಗುವುದು. ಇದರ ಉಪಯೋಗವನ್ನು ಪ್ರತಿಯೊಬ್ಬರೂ ಪಡೆದುಕೊಳ್ಳಬೇಕು ಎಂದರು.

ಗ್ರಂಥಾಲಯ ಕಾಮಗಾರಿ ಗುತ್ತಿಗೆ ಪಡೆದವರು ಗುಣಮಟ್ಟದಿಂದ ಕಾರ್ಯ ನಿರ್ವಹಿಸಬೇಕು. ಕಳಪೆ ಕಾಮಗಾರಿ ಮಾಡಿದರೆ ಸಹಿಸುವುದಿಲ್ಲ. ಗ್ರಾಮಸ್ಥರು ಸುಸಜ್ಜಿತ ಕಟ್ಟಡ ನಿರ್ಮಾಣಕ್ಕೆ ಸಹಕಾರ ನೀಡಬೇಕು. ಗ್ರಂಥಾಲಯದ ಅಭಿವೃದ್ಧಿಗೆ ಬೇಕಾದ ಸಹಕಾರ ನೀಡಲಾಗುವುದು ಎಂದು ತಿಳಿಸಿದರು.

ತಾಲೂಕಿನ ಎಲ್ಲಡೆ ಜ್ಞಾನಾರ್ಜನೆಗಾಗಿ ಗ್ರಂಥಾಲಯ ನಿರ್ಮಿಸಲಾಗುವುದು. ಯುವ ಸಮುದಾಯ ಮೊಬೈಲ್‌ ಗಳಲ್ಲಿ ಕಾಲ ಕಳೆಯದೆ ಓದಿನಡೆಗೆ ಒತ್ತು ನೀಡಿ ಜೀವನ ರೂಪಿಸಿಕೊಳ್ಳಬೇಕು ಎಂದರು.

ವಾಗಣಿಗೇರಿ ಗ್ರಾಮದ ಹರಿಜನ ವಾರ್ಡ್‌ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ನಿವಾಸಿಗಳಿಂದ ತಿಳಿದು ಬಂದಿದೆ. ಸಮರ್ಪಕವಾಗಿ ಕುಡಿಯುವ ನೀರು ಪೂರೈಸಲು ಅ ಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

Advertisement

ಜಿಪಂ ಮಾಜಿ ಅಧ್ಯಕ್ಷ ರಾಜಾ ಹಣಮಪ್ಪ ನಾಯಕ ತಾತಾ, ಯಲ್ಲಪ್ಪ ಕುರುಕುಂದಿ, ಗ್ರಾಪಂ ಅಧ್ಯಕ್ಷೆ ಯಲ್ಲಮ್ಮ ಮಲ್ಲಪ್ಪ, ಉಪಾಧ್ಯಕ್ಷ ರಾಘು ಪೂಜಾರಿ, ಗ್ರಾಪಂ ಸದಸ್ಯರು, ಗ್ರಾಪಂ ಮಾಜಿ ಅಧ್ಯಕ್ಷ ಮಾನಪ್ಪ ಹುಜರತಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next