Advertisement
ಇಲ್ಲಿಯ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಜರುಗಿದ ಸಾಮಾನ್ಯ ಸಭೆಯಲ್ಲಿ ಅವರು ಅಧಿಕಾರಿಗಳ ನಿರ್ಲಕ್ಷ್ಯ, ಬೇಜವಾಬ್ದಾರಿ ಹೇಳಿಕೆ, ಅಭಿವೃದ್ಧಿಯಲ್ಲಿ ಹಿನ್ನೆಡೆ, ತಪ್ಪು ಹಾಗೂ ಅಪೂರ್ಣ ಮಾಹಿತಿಗೆ ಕೆಂಡ ಕಾರಿದ ಅವರು, ಕೃಷಿ ನಿರ್ದೇಶಕ ಮತ್ತು ಗ್ರಾಮೀಣ ನೀರು ಸರಬರಾಜು ಇಲಾಖೆ ಎಇಇ ಹಣಮಂತ ಅಂಬ್ಲಿ ಹಾಗೂ ಭೂ ಸೇನಾ ನಿಗಮದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಇನ್ನೂ ಮುಂದೆ ಈ ರೀತಿ ನಿರ್ಲಕ್ಷ್ಯ ವಹಿಸಿದರೆ ಸಹಿಸುವುದಿಲ್ಲ ಎಂದು ತಾಕೀತು ಮಾಡಿದರು.
Related Articles
Advertisement
ಕೃಷಿ ಅಧಿಕಾರಿ ಕಚೇರಿಯಲ್ಲಿ ಇರುವುದೇ ಇಲ್ಲಾ. ರೈತರಿಗೆ ಸರಿಯಾದ ಮಾಹಿತಿ ನೀಡುವುದಿಲ್ಲ. ಇದುವರೆಗೆ ಒಂದು ಅಭಿವೃದ್ಧಿ ಕೆಲಸ ಮಾಡಿಲ್ಲ. ಚೆಕ್ ಡ್ಯಾಂ, ಕೃಷಿ ಹೊಂಡ ನಿರ್ಮಾಣದ ವಿಷಯದಲ್ಲಿ ನಮ್ಮನ್ನೂ ಕಡೆಗಣಿಸಿ ಸಂಘಟನೆಯವರಿಗೆ ಕೊಟ್ಟಿದ್ದಾರೆ ಎಂದು ಅನೇಕ ಸದಸ್ಯರು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಮಹಾದೇವಪ್ಪ ವಿರುದ್ಧ ಆಕ್ರೋಶ ಹೊರ ಹಾಕಿದರು.
ಇದುವರೆಗೂ ಆಗಿರುವ ಕಾಮಗಾರಿಗಳನ್ನು ಪರಿಶೀಲನೆ ಮಾಡಲು ತಾಪಂ ಇಒ ನೇತೃತ್ವದಲ್ಲಿ ಒಂಬತ್ತು ಸದಸ್ಯರ ಸಮಿತಿ ರಚಿಸುವಂತೆ ಪ್ರಸ್ತಾವನೆ ಮಾಡಿಸಿದರು. ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ದೇವಿಕಾ ಅವರೊಂದಿಗೆ ಮೊಬೈಲ್ನಲ್ಲಿ ಮಾತನಾಡಿ, ಎಡಿ ಕಾರ್ಯವೈಖರಿ ಬಗ್ಗೆ ಬೇಸರ ವ್ಯಕ್ತಪಡಿಸಿದರು.
ಜಿಪಂ ಇಂಜನಿಯರಿಂಗ್, ಆರೋಗ್ಯ, ಶಿಕ್ಷಣ ಇಲಾಖೆ, ಸಿಡಿಪಿಒ, ಬಿಸಿಎಂ, ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ಇನ್ನಿತರ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು. ತಾಪಂ ಅಧ್ಯಕ್ಷೆ ಅನುಸೂಬಾಯಿ ಚವ್ಹಾಣ, ಇಒ ಬಿ.ಜಗದೇವಪ್ಪ ಇದ್ದರು.