Advertisement

Surat; ಐದಂತಸ್ತಿನ ಕಟ್ಟಡ ಕುಸಿತ ಪ್ರಕರಣ; 7ಮಂದಿ ಸಾವು, ಇನ್ನೂ ಸಿಕ್ಕಿಬಿದ್ದಿದ್ದಾರೆ ಹಲವರು

03:47 PM Jul 07, 2024 | Team Udayavani |

ಸೂರತ್: ಭಾನುವಾರ ಗುಜರಾತ್‌ ನ ಸೂರತ್‌ ನಲ್ಲಿ ಐದು ಅಂತಸ್ತಿನ ಕಟ್ಟಡ ಕುಸಿದ ಸ್ಥಳದಿಂದ ಕನಿಷ್ಠ ಏಳು ಮೃತದೇಹಗಳನ್ನು ಹೊರತೆಗೆಯಲಾಗಿದೆ. ಶನಿವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಕನಿಷ್ಠ ನಾಲ್ಕೈದು ಮಂದಿ ಇನ್ನೂ ಅವಶೇಷಗಳಡಿ ಸಿಲುಕಿದ್ದಾರೆ.

Advertisement

ಮೃತಪಟ್ಟವರ ಸಂಖ್ಯೆಯನ್ನು ಸೂರತ್‌ನ ಮುಖ್ಯ ಅಗ್ನಿಶಾಮಕ ಅಧಿಕಾರಿ ಬಸಂತ್ ಪರೀಕ್ ಅವರು ದೃಢಪಡಿಸಿದರು. “ರಾತ್ರಿಯಿಡೀ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಏಳು ಮೃತ ದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ” ಎಂದು ಹೇಳಿದರು.

ಕನಿಷ್ಠ ಆರರಿಂದ ಏಳು ಜನರು ಇನ್ನೂ ಅವಶೇಷಗಳಡಿ ಸಿಕ್ಕಿಬಿದ್ದಿರುವ ಭಯವಿದ್ದು, ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ಎಸ್‌ಡಿಆರ್‌ಎಫ್ (ರಾಜ್ಯ ವಿಪತ್ತು ನಿರ್ವಹಣಾ ಪಡೆ) ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ತಂಡಗಳು ನಡೆಸುತ್ತಿವೆ.

ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆಗಾಗಿ ಘಟನಾ ಸ್ಥಳಕ್ಕೆ ಆಗಮಿಸಿದ ಸೂರತ್ ಪೊಲೀಸ್ ಕಮಿಷನರ್ ಅನುಪಮ್ ಸಿಂಗ್ ಗೆಹ್ಲೋಟ್, ರಕ್ಷಣಾ ಕಾರ್ಯಾಚರಣೆಯ ಆರಂಭದಲ್ಲಿ ಸಿಕ್ಕಿಬಿದ್ದ ವ್ಯಕ್ತಿಗಳ ಧ್ವನಿಗಳು ಕೇಳಿಬಂದವು ಎಂದು ಖಚಿತಪಡಿಸಿದ್ದಾರೆ. ಈ ಕಟ್ಟಡವನ್ನು 2016-17ರಲ್ಲಿ ನಿರ್ಮಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದರು.

ಮೇಲ್ನೋಟಕ್ಕೆ, ಕಟ್ಟಡದ ಸುಮಾರು ಐದು ಫ್ಲಾಟ್‌ಗಳನ್ನು ಹೆಚ್ಚಾಗಿ ಈ ಪ್ರದೇಶದಲ್ಲಿ ಕಾರ್ಖಾನೆಗಳಲ್ಲಿ ಕೆಲಸ ಮಾಡುವವರು ಇದ್ದಾರೆ ಎಂದು ಅವರು ಹೇಳಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next