Advertisement
ಮನೆಯ ಯಜಮಾನ ವಾಮನ ಅವರ ಪತ್ನಿ ವಸಂತಿ (68) ಮತ್ತು ವಾಮನ ಅವರ ಅಕ್ಕ ಪುಷ್ಪಾ (72) ಗಾಯಾಳುಗಳು. ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಸಂತಿ ಧರಿಸಿದ್ದ ಸೀರೆ ಅವರ ಮೈಗೆ ಅಂಟಿಕೊಂಡಿತ್ತು. ಬಳಿಕ ಸೀರೆಯನ್ನು ಕತ್ತರಿಸಿ ತೆಗೆಯಬೇಕಾಯಿತು. ಅದಾಗಲೇ ಕೈ, ಮುಖದ ಭಾಗ ಮತ್ತಿತರ ಕಡೆ ಬೆಂಕಿ ತಗಲಿತ್ತು ಎಂದು ನೆರವಿಗೆ ಧಾವಿಸಿದವರು ತಿಳಿಸಿದ್ದಾರೆ. ಅಧಿಕಾರಿಗಳಿಂದ ಪರಿಶೀಲನೆ
ಇಂಡೇನ್ ಗ್ಯಾಸ್ ಏಜೆನ್ಸಿಯ ಅಧಿಕಾರಿಗಳು ಆಗಮಿಸಿ ಪರಿಶೀಲಿಸಿದರು. ಗ್ಯಾಸ್ ಪೈಪ್, ರೆಗ್ಯುಲೇಟರ್, ಸಿಲಿಂಡರ್ ತಪಾಸಣೆ ನಡೆಸಿದ್ದು, ರೆಗ್ಯುಲೇಟರ್ ಸಮೀಪ ಪೈಪ್ನಿಂದ ಅನಿಲ ಸೋರಿಕೆಯಾಗಿರುವ ಶಂಕೆ ವ್ಯಕ್ತವಾಗಿದೆ. ಸುರತ್ಕಲ್ ಪೊಲೀಸರು ಹಾಗೂ ಫಾರೆನ್ಸಿಕ್ ತಜ್ಞರು ಕೂಡ ಪರಿಶೀಲಿಸಿದ್ದಾರೆ.
ಮನೆ ಯಜಮಾನ ವಾಮನ ಅಯ್ಯಪ್ಪ ವ್ರತಧಾರಿ ಯಾಗಿದ್ದು, ಮನೆ ಬಳಿಯಿರುವ ಸಣ್ಣ ಅಡುಗೆ ಕೋಣೆಯಲ್ಲಿ ಪ್ರತ್ಯೇಕವಾಗಿ ಅಡುಗೆ ಮಾಡಿಕೊಳ್ಳುತ್ತಿದ್ದರು. ಕೋಣೆಯ ಒಳಗೆ ಮತ್ತೆರಡು ಅನಿಲ ಜಾಡಿಗಳಿದ್ದವು. ಆದರೆ ಅಪಾಯ ಸಂಭವಿಸಿಲ್ಲ.
Related Articles
Advertisement
ಸಿಡಿದ ಛಾವಣಿದುರಂತದಲ್ಲಿ ಮನೆಯ ಛಾವಣಿಯ ಶೀಟ್ ಹಾರಿಹೋಗಿ ಸ್ಫೋಟದಂತಹ ಶಬ್ದ ಕೇಳಿಸಿದೆ. ಮನೆಯ ಹೊರಭಾಗಕ್ಕೂ ಬೆಂಕಿಯ ಕೆನ್ನಾಲಿಗೆ ವ್ಯಾಪಿಸಿತ್ತು. ಮನೆಯ ಒಳಭಾಗ, ಹೊರಗೆ ಇದ್ದ ಚಪ್ಪಲಿ ಸ್ಟಾಂಡ್, ಬಟ್ಟೆ ಬರೆ, ಕಟ್ಟಿಗೆ, ವಿದ್ಯುತ್ ಸಂಪರ್ಕ ವ್ಯವಸ್ಥೆ, ಸಮೀಪದ ಬಾಳೆ ಗಿಡ ಇತ್ಯಾದಿಗಳೂ ಕರಟಿ ಹೋಗಿವೆ.