Advertisement

Surathkal: ಅಡುಗೆ ಅನಿಲ ಸೋರಿಕೆ ಪ್ರಕರಣ; ಸುಧಾರಿಸದ ಗಾಯಾಳುಗಳ ಆರೋಗ್ಯ

07:52 PM Dec 19, 2024 | Team Udayavani |

ಸುರತ್ಕಲ್‌: ಸುರತ್ಕಲ್‌ನ ತಡಂಬೈಲ್‌ ವೆಂಕಟರಮಣ ಕಾಲನಿಯಲ್ಲಿ ಬುಧವಾರ ಮಧ್ಯಾಹ್ನ ಅಡುಗೆ ಮನೆಯಲ್ಲಿದ್ದ ಸಿಲಿಂಡರ್‌ ಸೋರಿಕೆಯಿಂದ ಬೆಂಕಿ ಹತ್ತಿಕೊಂಡು ಇಬ್ಬರು ಮಹಿಳೆಯರು ಗಾಯಗೊಂಡವರ ಸ್ಥಿತಿ ಸುಧಾರಿಸಿಲ್ಲ. ಚಿಂತಾಜನಕವಾಗಿದೆ.

Advertisement

ಪುಷ್ಪಾ (72), ವಸಂತಿ (68) ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವೆಂಟಿಲೇಟರ್‌ನಲ್ಲಿ ಇಟ್ಟು ಆರೋಗ್ಯ ಸುಧಾರಣೆಗೆ ಪ್ರಯತ್ನ ನಡೆಸಲಾಗುತ್ತಿದೆ. ಬುಧವಾರ ಮಧ್ಯಾಹ್ನ ಅಡುಗೆ ಕೋಣೆಯಲ್ಲಿ ಗ್ಯಾಸ್‌ ಹೊತ್ತಿಸಲು ಹೋದಾಗ ಗ್ಯಾಸ್‌ ಸೋರಿಕೆಯಿಂದ ಒಳಭಾಗದಲ್ಲಿ ಬೆಂಕಿ ಕಾಣಿಸಿಕೊಂಡು ವಸಂತಿ ಹಾಗೂ ಅವರ ಸಹಾಯಕ್ಕಾಗಿ ಹೋದ ಪುಷ್ಪಾ ಅವರಿಗೆ ಬೆಂಕಿ ತಗಲಿ ಗಂಭೀರ ಗಾಯವಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next