ಮಂಗಳೂರು ಉತ್ತರ ಸಂಚಾರಿ ಪೊಲೀಸ್ ಇನ್‌ಸ್ಪೆಕ್ಟರ್ ಮಂಜುನಾಥ್ ಅವರು ಆಡಿಯೋ ವಿಷುವಲ್ ಮೂಲಕ ಕಾರ್ಯಕ್ರಮ ನಡೆಸಿಕೊಟ್ಟರು.
Advertisement
ಮಂಜುನಾಥ್ ಅವರು ಈಗಾಗಲೇ ಮಂಗಳೂರು ಉತ್ತರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಅನೇಕ ಶಾಲೆಗಳಿಗೆ ಭೇಟಿ ಕೊಟ್ಟು ಮಕ್ಕಳಲ್ಲಿ ರಸ್ತೆ ಸುರಕ್ಷೆ ಮತ್ತು ವಾಹನ ಚಲಾವಣೆಯಲ್ಲಿ ಚಾಲಕರು ನಿರ್ವಹಿಸಬೇಕಾದ ಎಚ್ಚರಿಕೆ ಕ್ರಮಗಳನ್ನು ತಿಳಿಸಿಕೊಟ್ಟಿದ್ದು, ಚಿತ್ರಾಪುರದ ಪ್ರೌಢಶಾಲೆ ಮತ್ತು ಕುಳಾಯಿಯ ವೆಂಕಟರಮಣ ಪ್ರೌಢಶಾಲೆಯಲ್ಲಿ ಕೂಡ ಟ್ರಾಫಿಕ್ ಸಮಸ್ಯೆಯ ಬಗ್ಗೆ ಮಕ್ಕಳಲ್ಲಿ ಅರಿವು ಕಾರ್ಯಕ್ರಮವನ್ನು ಅವರು ಹಮ್ಮಿಕೊಂಡಿದ್ದರು. ಪ್ರತಿಶಾಲೆಯಲ್ಲಿ ಮಕ್ಕಳಿಗೆ ಸ್ಪರ್ಧೆ ಏರ್ಪಡಿಸಿ ಆ ಮೂಲಕ ಬಹುಮಾನ ನೀಡಿ ಪ್ರೋತ್ಸಾಹಿಸುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಟ್ರಾಫಿಕ್ ನಿಯಮವನ್ನು ಮೈಗೂಡಿಸಿ ಅಪಘಾತ ಮುಕ್ತ ಸಮಾಜ ನಿರ್ಮಾಣ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಬಹುದಾಗಿದೆ ಎಂಬುದು ಮಂಜುನಾಥ ಅವರು ಅಭಿಪ್ರಾಯ.