Advertisement

ಸುರತ್ಕಲ್ ಫಾಝಿಲ್ ಕೊಲೆ ಪ್ರಕರಣ: ಕೃತ್ಯಕ್ಕೆ ಬಳಸಿದ ಕಾರು ಮಾಲಕ ಪೊಲೀಸ್ ವಶಕ್ಕೆ

10:20 AM Jul 31, 2022 | Team Udayavani |

ಮಂಗಳೂರು: ಕರಾವಳಿಯಲ್ಲಿ ಸಂಚಲನ ಮೂಡಿಸಿದ್ದ ಸುರತ್ಕಲ್ ನ ಫಾಝಿಲ್ ಕೊಲೆ ಪ್ರಕರಣದಲ್ಲಿ ಮತ್ತೋರ್ವನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

Advertisement

ಗುರುವಾರ ರಾತ್ರಿ ಮಂಗಳೂರು ಹೊರವಲಯದ ಸುರತ್ಕಲ್ ನಲ್ಲಿ ಮಂಗಳಪೇಟೆ ನಿವಾಸಿ 23 ವರ್ಷದ ಫಾಝಿಲ್ ನ ಮೇಲೆ ಮಾರಕಾಸ್ತ್ರಗಳಂದ ಹಲ್ಲೆ ಮಾಡಿ ಕೊಲೆ ಮಾಡಲಾಗಿತ್ತು.

ಇದೀಗ ಘಟನೆಗೆ ಸಂಬಂಧಿಸಿದಂತೆ ಕೊಲೆ ಆರೋಪಿಗಳಿಗೆ ಸಹಾಯ ಮಾಡಿದ್ದ ಆರೋಪದಡಿ ಕಾರು ಮಾಲಕನನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ ಫಾಝಿಲ್ ಪ್ರಕರಣದಲ್ಲಿ ಇದುವರೆಗೆ ಯಾರನ್ನೂ ಬಂಧಿಸಿಲ್ಲ ಎಂದು ತಿಳಿಸಿದ್ದಾರೆ.

16 ಮಂದಿ ವಶಕ್ಕೆ: ಫಾಝಿಲ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಮತ್ತೆ 16 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ಗೊಳಪಡಿಸಿದ್ದು ಆರೋಪಿಗಳ ಬಗ್ಗೆ ಮಹತ್ವದ ಸುಳಿವು ಸಿಕ್ಕಿದೆ.

ಇದನ್ನೂ ಓದಿ:ಪಿಎಫ್ಐ ನಿಷೇಧ ಮಾಡಿ; ಮುಸ್ಲಿಂ ಮುಖಂಡರ ಜತೆ ಅಜಿತ್‌ ದೋವಲ್‌ ಮಾತುಕತೆ

Advertisement

ಕೃತ್ಯದಲ್ಲಿ ನೇರವಾಗಿ ಭಾಗಿಯಾಗಿರುವ ನಾಲ್ಕು ಮಂದಿ ಹಾಗೂ ಇತರ ಇಬ್ಬರು ಆರೋಪಿಗಳನ್ನು ಪೊಲೀಸರು ತೀವ್ರ ವಿಚಾರಣೆಗೊಳಪಡಿಸಿದ್ದು ಶೀಘ್ರ ಬಂಧನ ಪ್ರಕ್ರಿಯೆಗೆ ಒಳಪಡಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸಂಶಯದ ಮೇರೆಗೆ ಮೊದಲು 21 ಮಂದಿ ಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿ ಬಿಡುಗಡೆ ಮಾಡಿದ್ದಾರೆ. ಶುಕ್ರವಾರ ರಾತ್ರಿ ಮತ್ತೆ 16 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಈ ರೀತಿ ವಶಕ್ಕೆ ಪಡೆದವರಿಂದ ದೊರೆತ ಮಾಹಿತಿಯ ಆಧಾರದಲ್ಲಿ ಆರೋಪಿ ಗಳ ಖಚಿತ ಮಾಹಿತಿ ಲಭ್ಯವಾಗಿದೆ ಎಂದು ಮೂಲಗಳು ತಿಳಿಸಿವೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next