ಮಂಗಳೂರು : ಸುರತ್ಕಲ್ ನ ಚಿತ್ರಾಪುರ ಸಮೀಪದ ಕಡಲ ಕಿನಾರೆಯಲ್ಲಿ ಮಾದಕ ವ್ಯಸನಿ ದುಷ್ಕರ್ಮಿಗಳು ರಿಕ್ಷಾ ಚಾಲಕ ಸೇರಿ ಗ್ರಾಮಸ್ಥರಿಗೆ ತಲವಾರು ಝಳಪಿಸಿ ಹಲ್ಲೆ ನಡೆಸಿ,ಬೆದರಿಕೆ ಹಾಕಿದ ಘಟನೆ ಭಾನುವಾರ ಸಂಜೆ ನಡೆದಿದೆ.
ಗಾಂಜಾ ಸೇವಿಸಿದ ಅಮಲಿನಲ್ಲಿ ಈ ಕೃತ್ಯ ಎಸಗಿದ್ದು, ಸುನಿಲ್ ಎಂಬ ರಿಕ್ಷಾ ಚಾಲಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲ್ಲೆ ನಡೆಸಿದ ಆರೋಪಿ ಅಮನ್ ಎಂಬಾತನನ್ನು ಪೊಲೀಸರು ಸ್ಥಳೀಯರ ಸಹಕಾರದಿಂದ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನೋರ್ವ ಸ್ಥಳದಿಂದ ಪರಾರಿಯಾಗಿದ್ದು ಆತನಿಗಾಗಿ ಶೋಧ ನಡೆಸಲಾಗುತ್ತಿದೆ.
ಕಡಲು ಕೊರೆತ ತಡೆಗೆ ಹಾಕಲಾಗಿದ್ದ ಕಲ್ಲುಗಳಲ್ಲಿ ಕಳೆದ ಹಲವು ತಿಂಗಳಿನಿಂದ ಮಾದಕ ವ್ಯಸನಿಗಳು ಅನೈತಿಕ ದಂಧೆ ನಡೆಸುತ್ತಿದ್ದು, ಈ ಕುರಿತು ಸ್ಥಳೀಯರು ಎಚ್ಚರಿಕೆ ನೀಡಿದ್ದರು ಎಂದು ತಿಳಿದು ಬಂದಿದೆ. ಸೇಡಿನಲ್ಲಿ ಈ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ ಎಂದು ಹೇಳಲಾಗಿದೆ.
ಸುರತ್ಕಲ್ ಠಾಣಾ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.