ಮಂಗಳೂರು: ಹಲವು ಕಾಲದ ನಾಗರಿಕರ ಹೋರಾಟಕ್ಕೆ ಫಲ ಸಿಕ್ಕಿದ್ದು, ಮಂಗಳೂರಿನ ಸುರತ್ಕಲ್ ಸಮೀಪದ ಟೋಲ್ ಸಂಗ್ರಹ ಕೇಂದ್ರ ರದ್ದು ಮಾಡಲಾಗದೆ. ಇಲ್ಲಿಗೆ ಕೆಲವೇ ಕಿ.ಮೀ ದೂರದಲ್ಲಿರುವ ಹೆಜಮಾಡಿ ಟೋಲ್ ಗೇಟ್ ಜೊತೆ ವಿಲೀನ ಮಾಡಲಾಗಿದೆ.
ಈ ಬಗ್ಗೆ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಟ್ವೀಟ್ ಮಾಡಿ ಸ್ಪಷ್ಟ ಪಡಿಸಿದ್ದಾರೆ.
ಆದರೆ, ಹೆಜಮಾಡಿ ಟೋಲ್ ಪ್ಲಾಜಾದಲ್ಲಿ ಹೆಚ್ಚುವರಿ ಬಳಕೆದಾರರ ಶುಲ್ಕವನ್ನು ಸಂಗ್ರಹಿಸಲು ಸರ್ಕಾರ ನಿರ್ಧರಿಸಿದೆ.
ಇದನ್ನೂ ಓದಿ:”ಎಲ್ಲಿ ಬೇಕಾದರೂ ನಿಲ್ಲುವವನು ನಾಯಕ”: ಬಿಜೆಪಿ ನಾಯಕರಿಗೆ ಸಿದ್ದರಾಮಯ್ಯ ತಿರುಗೇಟು
ಮಂಗಳೂರಿನ ಸುರತ್ಕಲ್ ಸಮೀಪದ ಟೋಲ್ ಸಂಗ್ರಹ ಕೇಂದ್ರ ರದ್ದಾಗಿದ್ದು, ನಮ್ಮ ಮನವಿಗೆ ಸೂಕ್ತವಾಗಿ ಸ್ಪಂದಿಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಾಗರಿಕರ ಪರವಾಗಿ ಧನ್ಯವಾದಗಳು. ಟೋಲ್ ರದ್ದು ಮಾಡುವ ಭರವಸೆಯನ್ನು ಈ ಮೊದಲೇ ಕೇಂದ್ರ ಸಚಿವರು ನೀಡಿದ್ದು, ಈಗ ತಾಂತ್ರಿಕ ಅಂಶ ಪೂರೈಸಲಾಗಿದೆ ಎಂದು ನಳಿನ್ ಕಟೀಲ್ ಟ್ವೀಟ್ ಮಾಡಿದ್ದಾರೆ.