Advertisement

ಸುರತ್ಕಲ್ ಟೋಲ್ ತೆರವಿಗೆ ಹೋರಾಟಗಾರರು ಸಜ್ಜು: ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

11:02 AM Oct 18, 2022 | Team Udayavani |

ಸುರತ್ಕಲ್‌ : ಸುರತ್ಕಲ್‌ ಟೋಲ್‌ ಕೇಂದ್ರ ತೆರವಿಗೆ ನವಯುಗ್‌ ಸಂಸ್ಥೆ ಮುಂದಾಗದಿರುವ ಕಾರಣ ಸುರತ್ಕಲ್‌ ಟೋಲ್‌ ವಿರೋಧಿ ಹೋರಾಟ ಸಮಿತಿಯ ಸದಸ್ಯರು ಟೋಲ್ ಕೇಂದ್ರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜಮಾವಣೆಗೊಂಡಿದ್ದಾರೆ.

Advertisement

ಕೇಂದ್ರ ಸರಕಾರದ ಆದೇಶದ ಮೇರೆಗೆ ಟೋಲ್‌ ಕೇಂದ್ರ ನಿರ್ಮಾಣ ಆಗಿರುವುದರಿಂದ ಕಾನೂನು ಕೈಗೆತ್ತಿಕೊಳ್ಳದಂತೆ ಪೊಲೀಸ್‌ ಇಲಾಖೆ ಹೋರಾಟಗಾರರಲ್ಲಿ ಮನವಿ ಮಾಡಿದ್ದಾರೆ.

ಸ್ಥಳಕ್ಕೆ ಪೊಲೀಸ್ ಆಯುಕ್ತ ಭೇಟಿ ನೀಡಿದ್ದು ಯಾವುದೇ ಅಹಿತಕರ ಘಟನೆ ನಡೆಯದಂತೆ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಅಲ್ಲದೆ ವಾಹನ ಸಂಚಾರಕ್ಕೆ ಅಡ್ಡಿಪಡಿಸಲು ಅವಕಾಶವಿಲ್ಲ ಎಂದು ಹೋರಾಟಗಾರರಿಗೆ ಸ್ಪಷ್ಟಪಡಿಸಿದ್ದಾರೆ.

ಹೋರಾಟಗಾರರು ಹೆದ್ದಾರಿ ಪಕ್ಕದ ಸರ್ವಿಸ್ ರಸ್ತೆಯಲ್ಲಿ ನಿಂತು ಸಂಸದರು, ಶಾಸಕರ ವಿರುದ್ದ ಘೋಷಣೆ ಕೂಗಿದ್ದಾರೆ. ಹೋರಾಟ ಸಮಿತಿಯವರು, ಕಾಂಗ್ರೆಸ್ ಮುಖಂಡರು ಹೋರಾಟಲ್ಲಿ ಭಾಗಿಯಾಗಿದ್ದಾರೆ.

ಮಾಜಿ ಶಾಸಕರಾದ ಜೆ.ಆರ್ ಲೊಬೋ, ಶಕುಂತಳಾ‌ಶೆಟ್ಟಿ, ಮುಖಂಡರಾದ ಐವನ್ ಡಿಸೋಜ, ಮುನಿರ್ ಕಾಟಿಪಳ್ಳ, ವಿನಯ ಕುಮಾರ್ ಸೊರಕೆ ಮೊದಲಾದವರು ಭಾಗಿ.

Advertisement

ಟೋಲ್‌ ಗೇಟ್‌ ಗೆ ನುಗ್ಗಿದ ಪ್ರತಿಭಟನಾಕಾರರು: ಹೆದ್ದಾರಿಯ ಒಂದೇ ಬದಿ ವಾಹನಗಳ ಸಂಚಾರಕ್ಕೆ ಅವಕಾಶ. ಇನ್ನೊಂದು ಭಾಗದಲ್ಲಿ ಪ್ರತಿಭಟನಾಕಾರರು ಪ್ರತಿಭಟಿಸುತ್ತಿದ್ದಾರೆ. ಟೋಲ್ ಗೇಟ್ ಗಾಜಿಗೆ ಹಾನಿಯಾಗಿರುವುದು ತಿಳಿದು ಬಂದಿದೆ.

ಇದನ್ನೂ ಓದಿ : ಅನಾಥ ಯುವತಿಗೆ ವಿವಾಹ ಯೋಗ : ಹೆತ್ತವರ ಸ್ಥಾನದಲ್ಲಿ ನಿಂತ ಸರಕಾರ

ವಾಹನ ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆ :
ಟೋಲ್‌ಗೇಟ್‌ ಮುಂದೆ ಧರಣಿ ಕುಳಿತುಕೊಳ್ಳುವ ಸಾಧ್ಯತೆ ಇರುವುದರಿಂದ ವಾಹನ ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆ ಮಾಡಲಾಗಿದೆ. ಉಡುಪಿಯಿಂದ ಬರುವವರು ಮೂಲ್ಕಿ – ಕಿನ್ನಿಗೋಳಿ, ಬಜಪೆ – ಕಾವೂರು -ಕೂಳೂರು ಮೂಲಕ ಹಾಗೂ ಮಂಗಳೂರಿನಿಂದ ಉಡುಪಿಯತ್ತ ಹೋಗುವವರು ಕೂಳೂರು – ಕಾವೂರು – ಬಜಪೆ – ಕಿನ್ನಿಗೋಳಿ – ಮೂಲ್ಕಿ ಮೂಲಕ ಹೋಗಬೇಕಾದ ಅನಿವಾರ್ಯತೆಯಿದೆ.

ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ಅನ್ಶು ಕುಮಾರ್‌ ಅವರು ಆಗಮಿಸಿ ಸಿದ್ಧತೆ ಪರಿಶೀಲಿಸಿದರು. ಪಣಂಬೂರು ವಿಭಾಗದ ಪೊಲೀಸ್‌ ಸಹಾಯಕ ಆಯುಕ್ತ ಮಹೇಶ್‌ ಕುಮಾರ್‌ ನೇತೃತ್ವದಲ್ಲಿ ಹಿರಿಯ ಪೊಲೀಸ್‌ ಇನ್‌ಸ್ಪೆಕ್ಟರ್‌ಗಳ ಸಹಿತ 6 ಕೆಆಸ್‌ಆರ್‌ಪಿ ತುಕಡಿಗಳು ಭದ್ರತೆಗೆ ನಿಯೋಜನೆಗೊಂಡಿವೆ.

 

Advertisement

Udayavani is now on Telegram. Click here to join our channel and stay updated with the latest news.

Next