ಮಂಗಳೂರು: ಸುರತ್ಕಲ್ನ ಜನತಾ ಕಾಲೋನಿ ಬಳಿಯ ಮಸೀದಿ ಆಡಳಿತ ಸಮಿತಿಯ ಕಾರ್ಯದರ್ಶಿ ಮೊಹಮ್ಮದ್ ಶಾಫಿ ಎಂಬವರಿಗೆ (35)ಚೂರಿ ಇರಿದಿರುವ ಘಟನೆ ವರದಿಯಾಗಿದೆ.
ಸ್ಥಳೀಯ ಯುವಕ ತಾಹಿರ್(24) ಚಾಕುವಿನಿಂದ ಇರಿದು ಪರಾರಿಯಾದ ಯುವಕ ಎಂದು ತಿಳಿದು ಬಂದಿದೆ.
ಗುರುವಾರ ರಾತ್ರಿ ಕಾನಕಾಲನಿ ಮಸೀದಿಯ ಬಳಿ ಇಬ್ಬರ ನಡುವೆ ಜಗಳವಾಗಿದ್ದು, ತಾಹಿರ್ ಚೂರಿಯಲ್ಲಿ ಇರಿದು ಪರಾರಿಯಾಗಿದ್ದಾನೆ. ಮಸೀದಿಯಲ್ಲಿನ ದೀಪಗಳನ್ನು ಸ್ವಿಚ್ ಆಫ್ ಮಾಡುವ ಬಗ್ಗೆ ಭಿನ್ನಾಭಿಪ್ರಾಯದಿಂದ ವಾಗ್ವಾದ ನಡೆದಿದೆ ಎಂದು ವರದಿಯಾಗಿದೆ.
ಘಟನೆಯ ನಂತರ ಮೊಹಮ್ಮದ್ ಶಾಫಿ ಬೆನ್ನು ಮತ್ತು ಕೈಗೆ ಚೂರಿ ಇರಿತದ ಗಂಭೀರ ಗಾಯಗಳಾಗಿದ್ದು, ಅವರನ್ನು ವೈದ್ಯಕೀಯ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸಂಬಂಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.