Advertisement

ಉದ್ವಿಗ್ನತೆಯ ನಡುವೆಯೇ ಸುರತ್ಕಲ್ ನಲ್ಲಿ ಮತ್ತೆ ಯುವಕನ ಮೇಲೆ ತಲವಾರು ದಾಳಿ

08:53 PM Jul 28, 2022 | Team Udayavani |

ಸುರತ್ಕಲ್ : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಹತ್ಯೆಯ ಬಳಿಕ ಉದ್ವಿಗ್ನ ಸ್ಥಿತಿ ನಿರ್ಮಾಣ ವಾಗಿರುವ ವೇಳೆ ಮತ್ತೆ ರಕ್ತ ಚಿಮ್ಮಿದ್ದು, ಸುರತ್ಕಲ್ ನಲ್ಲಿ ಗುರುವಾರ ರಾತ್ರಿ ಯುವಕನೊಬ್ಬನ ಮೇಲೆ ಮಾರಕಾಯುಧಗಳಿಂದ ದಾಳಿ ಮಾಡಲಾಗಿದೆ.

Advertisement

ಮಂಗಳ ಪೇಟೆಯ ಫಾಝಿಲ್ ಎಂಬ ಯುವಕನ ಮೇಲೆ ತಲವಾರು ದಾಳಿ ನಡೆಸಲಾಗಿದೆ. ಚಪ್ಪಲಿ ಖರೀದಿಗೆ ಬಂದಿದ್ದ ಫಾಝಿಲ್ ಮೇಲೆ ಅಂಗಡಿಯ ಎದುರಿನ ಜಗಲಿಯಲ್ಲೇ ತಲವಾರಿನಿಂದ ದಾಳಿ ನಡೆಸಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ತಪ್ಪಿಸಿಕೊಳ್ಳಲು ಯತ್ನಿಸಿದರು ಸಾಧ್ಯವಾಗಲಿಲ್ಲ.

ಭಾರೀ ಪ್ರಮಾಣದಲ್ಲಿ ರಕ್ತ ಸ್ರಾವ ವಾಗಿದ್ದು, ಗಂಭೀರ ಸ್ಥಿತಿಯಲ್ಲಿರುವ ಫಾಝಿಲ್ ರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು ಹೆಚ್ಚಿನ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಪೊಲೀಸರು ಸಿಸಿಟಿವಿ ಪರಿಶೀಲನೆ ನಡೆಸುತ್ತಿದ್ದಾರೆ.

ಹೆಚ್ಚಿನ ವಿವರ ಗಳನ್ನು ನಿರೀಕ್ಷಿಸಲಾಗುತ್ತಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next