Advertisement
ಆರೋಪಿಗಳನ್ನು ಮುಡಿಪು ಎಂಬಲ್ಲಿ ಪೊಲೀಸರು ಬಂಧಿಸಿದ್ದು, ಬಂಟ್ವಾಳ ನಿವಾಸಿ ಸತೀಶ್ ಕುಲಾಲ್ ಹಾಗೂ ಕಿನ್ನಿಗೋಳಿ ನಿವಾಸಿ ಗಿರೀಶ್ ಬಂಧಿತ ಆರೋಪಿಗಳು. ಇವರು ಶನಿವಾರ ರಾತ್ರಿ ಕೇರಳ ಭಾಗದಿಂದ ಬಂಟ್ವಾಳ ಕಡೆಗೆ ಬರುತ್ತಿರುವ ಕುರಿತು ಮಾಹಿತಿ ಪಡೆದ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ. ಬಂಟ್ವಾಳ ಡಿವೈಎಸ್ಪಿ ವೆಲೆಂಟೆನ್ ಡಿಸೋಜ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದೆ.
Related Articles
Advertisement
ಇದನ್ನೂ ಓದಿ:ಹನಿಟ್ರ್ಯಾಪ್: 5.45 ಲಕ್ಷ ರೂ. ದರೋಡೆ; ಬಂಧನ
ಕಿಶನ್ ಹೆಗ್ಡೆ ಕೊಲೆಯಲ್ಲಿ ಇವನು ಹಣದ ಸಹಾಯ ಮಾಡಿರುವ ವಿಷಯ ನನಗೆ ತಿಳಿದಿತ್ತು. ನಾನು ಅವನ ಹತ್ತಿರ ಹೇಳಿದ್ದೆ, ನೀನು ತಪ್ಪು ಮಾಡುತ್ತಿದ್ದೀಯ ಸುರೇಂದ್ರ, ನಿನಗೆ ಬೇಡದ ವಿಷಯ. ಆಗ ಈ ವಿಷಯ ಹೊರಗಡೆ ಹೇಳಿದ್ರೆ ನಿನ್ನನ್ನು ಸಾಯಿಸುತ್ತೇನೆ ಅಂತ ನನಗೇ ಬೆದರಿಕೆ ಹಾಕಿದ್ದ. ಮೊನ್ನೆ ಅನಾಮಿಕ ಯುವಕನಿಗೆ ಕರೆ ಮಾಡಿ ಜೈಲಿನಲ್ಲಿರೋ ಮನೋಜನಿಗೆ ಹಣ, ಬಟ್ಟೆ ಕೊಡಲಿಕ್ಕಿದೆ. ಇದಕ್ಕೆ ನಿಮ್ಮ ಸಹಾಯ ಬೇಕು ಅಂತಾ ಹೇಳುತ್ತಿದ್ದ. ಮತ್ತೂಂದು ದಿನ ರಾತ್ರಿ ಕರೆ ಮಾಡಿ ಬಟ್ಟೆ, ಹಣ ತಲುಪಿಸಿದ್ದೇನೆ. ಸಹಾಯ ಮಾಡಿದ್ದಕ್ಕಾಗಿ ಥ್ಯಾಂಕ್ಸ್ ಅಂತಾ ಹೇಳಿದ್ದನ್ನು ನಾನು ಕೇಳಿದ್ದೇನೆ. ಮತ್ತೆ ಈ ವಿಚಾರದಲ್ಲಿ ನಾನು ಕಿಶನ್ ಜತೆ ಇದ್ದ ನನ್ನ ಗೆಳೆಯನಿಗೆ ಕರೆ ಮಾಡಿ ತಿಳಿಸಿದೆ. ಅವನಿಗೆ ಈ ವಿಚಾರದಲ್ಲಿ ಕೋಪ ಮತ್ತು ಬೇಸರ ಕೂಡ ಇತ್ತು. ಇವನು ಇದೇ ರೀತಿ ಇದ್ದರೆ ಸುರೇಂದ್ರ ಮತ್ತು ಕೋಡಿಕೆರೆ ಮನೋಜನಿಂದ ಹಲವು ಯುವಕರ ಕೊಲೆಯಾಗುವುದರಲ್ಲಿ ಸಂಶಯವಿಲ್ಲ. ಅದಕ್ಕಾಗಿ ನಾವು ಈ ಕೊಲೆ ಮಾಡಿದ್ದೇವೆ. ನಾವೀಗ ಕಾರವಾರದಲ್ಲಿದ್ದು, ಏನು ಮಾಡಬೇಕೆಂದು ತೋಚದೆ ಇಲ್ಲಿಗೆ ಬಂದಿದ್ದೇವೆ. 2-3 ದಿನದಲ್ಲಿ ಪೊಲೀಸರಿಗೆ ಶರಣಾಗುತ್ತೇವೆ ಎಂದು ಆಡಿಯೋದಲ್ಲಿ ಮಾತನಾಡಿರುವ ವ್ಯಕ್ತಿ ಹೇಳಿದ್ದು, ವೈರಲ್ ಆಗಿತ್ತು.