Advertisement
ನಗರದ ವಿಶ್ವೇಶ್ವರಯ್ಯ ನಗರದ ಸಂಪಿಗೆ ರಸ್ತೆಯಲ್ಲಿರುವ ಸುರೇಶ್ ಅಂಗಡಿ ಅವರ ನಿವಾಸಕ್ಕೆ ಬುಧವಾರ ಬೆಳಿಗ್ಗೆ ಆಗಮಿಸಿದ ಮುಖ್ಯಮಂತ್ರಿಗಳು, ದಿ.ಸುರೇಶ್ ಅಂಗಡಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ನಮನ ಸಲ್ಲಿಸಿದರು.
Related Articles
Advertisement
ಇದನ್ನೂ ಓದಿ:ಅಟಲ್ ಸುರಂಗ: ಉದ್ಘಾಟನೆಗೊಂಡ 72 ಗಂಟೆಗಳಲ್ಲಿ 3 ಅಪಘಾತ
ದೆಹಲಿಯಲ್ಲಿ ಸ್ಮಾರಕ ನಿರ್ಮಾಣಕ್ಕೆ ಸೂಚನೆ:
ದೆಹಲಿಯ ರುದ್ರಭೂಮಿಯ ಅಭಿವೃದ್ಧಿಯ ಜೊತೆಗೆ ಅಲ್ಲಿ ದಿ.ಸುರೇಶ್ ಅಂಗಡಿ ಅವರ ಸ್ಮಾರಕ ನಿರ್ಮಾಣ ಮಾಡುವುದಕ್ಕೆ ಸಂಬಂಧಿಸಿದಂತೆ ಈಗಾಗಲೇ ನಿರ್ದೇಶನ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಜಗದೀಶ್ ಶೆಟ್ಟರ್, ಬಾಕಿ ಉಳಿದಿದ್ದ ರೈಲ್ವೆ ಇಲಾಖೆಯ ಬಹುತೇಕ ಯೋಜನೆಗಳಿಗೆ ಅಂಗಡಿ ಅವರು ಚಾಲನೆ ನೀಡಿದ್ದರು ಎಂದು ನೆನಪಿಸಿಕೊಂಡರು.
ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಕರ್ನಾಟಕದ ವಿವಿಧ ರೈಲ್ವೆ ಯೋಜನೆಗಳನ್ನು ಪೂರ್ಣಗೊಳಿಸಲು ತೀವ್ರ ಆಸಕ್ತಿಯಿಂದ ಕೆಲಸ ಮಾಡುತ್ತಿದ್ದರು ಎಂದು ಹೇಳಿದರು.
ಇದನ್ನೂ ಓದಿ:ಹತ್ರಾಸ್ ಘಟನೆ ಭಯಾನಕ : ಸಾಕ್ಷ್ಯ ರಕ್ಷಣೆಗೆ ಏನು ಕ್ರಮ ಕೈಗೊಂಡಿದ್ದೀರಿ: ಸುಪ್ರೀಂ ಪ್ರಶ್ನೆ
ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ಬಳಿಕ ಅಂಗಡಿ ಅವರು ಅತ್ಯಂತ ಚಟುವಟಿಕೆಯಿಂದ ಕೆಲಸ ಮಾಡುತ್ತಿದ್ದರು ಎಂದು ಸ್ಮರಿಸಿದರು.
ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ಅವರು ಸುರೇಶ್ ಅಂಗಡಿ ಅವರೊಂದಿಗಿನ ಒಡನಾಟ ಸ್ಮರಿಸಿ, ಕುಟುಂಬಕ್ಕೆ ಸಾಂತ್ವನ ಹೇಳಿದರು.
ಪತ್ನಿ ಮಂಗಲಾ ಸುರೇಶ್ ಅಂಗಡಿ, ಮಕ್ಕಳಾದ ಶ್ರದ್ಧಾ ಹಾಗೂ ಸ್ಫೂರ್ತಿ ಶಾಸಕ ಅನಿಲ್ ಬೆನಕೆ, ಮಾಜಿ ಶಾಸಕ ಸಂಜಯ ಪಾಟೀಲ, ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಸೇರಿದಂತೆ ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.