Advertisement

ಪುಸ್ತಕದಲ್ಲಿ ‘ಅಂಚೆಯಣ್ಣ’ ಚಿತ್ರಕ್ಕೆ ಮಲಯಾಳಂನ ಫೋಟೊ: ಸ್ಪಷ್ಟನೆ ನೀಡಿದ ಸುರೇಶ್ ಕುಮಾರ್

09:22 AM Feb 01, 2022 | keerthan |

ಬೆಂಗಳೂರು: ಪಾಠ ಪುಸ್ತಕವೊಂದರಲ್ಲಿ ಮಲಯಾಳಂ ಚಿತ್ರನಟ ಕುಂಚಾಕೋ ಬಾಬನ್ ಅವರ ಫೋಟೊವನ್ನು ಅಂಚೆಯಣ್ಣ ಶೀರ್ಷಿಕೆಯಡಿ ಪ್ರಕಟಿಸಿದ ವಿಚಾರಕ್ಕೆ ಸಂಬಂಧಿಸಿ ಮಾಜಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಸ್ಪಷ್ಟೀಕರಣ ನೀಡಿದ್ದಾರೆ. ಇದೇ ವೇಳೆ ಸರ್ಕಾರವನ್ನು ಟೀಕಿಸಿದ ಸಂಸದ ಡಿಕೆ ಸುರೇಶ್ ಅವರಿಗೂ ತಿರುಗೇಟು ನೀಡಿದ್ದಾರೆ.

Advertisement

ರಾಜ್ಯದ ತರಗತಿಯೊಂದರ ಪುಸ್ತಕದಲ್ಲಿ ‘ಅಂಚೆಯಣ್ಣ’ ಎಂಬ ಶೀರ್ಷಿಕೆಗೆ ಮಲಯಾಳಂ ಚಲನಚಿತ್ರ ನಟರ ಫೋಟೋ ಹಾಕಿರುವುದನ್ನು ಬಿಜೆಪಿ ಸರ್ಕಾರದ ಕಾರ್ಯ ಎಂದು ಬಣ್ಣಿಸಿ ಇದು ಯಾರ ನಿರ್ದೇಶನದಲ್ಲಿ ಮಾಡಿರುವುದು ಎಂದು ಕೇಳಿರುವ ಸಂಸದ ಡಿ.ಕೆ.ಸುರೇಶ್ ಅವರ ಅವಸರದ ಆರೋಪದಲ್ಲಿ ಯಾವುದೇ ಸತ್ಯವಿಲ್ಲ ಎಂದು ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ.

ಡಿಕೆ ಸುರೇಶ್ ರವರೇ, ಅಷ್ಟು ಧಾವಂತ ಬೇಡ. ಅವಸರ ವಿವೇಚನೆ ಕಸಿದುಕೊಳ್ಳುತ್ತದೆ. ನಿಮ್ಮ ಗ್ರಹಿಕೆ ಸಂಪೂರ್ಣವಾಗಿ ತಪ್ಪು. ಇದು ಖಂಡಿತ ನಮ್ಮ ರಾಜ್ಯದ ಶಿಕ್ಷಣ ಇಲಾಖೆ ಪ್ರಕಟಿಸಿರುವ ಅಧಿಕೃತ ಪಠ್ಯ ಪುಸ್ತಕವಲ್ಲ. ಇದೊಂದು ಖಾಸಗಿ ಪ್ರಕಾಶಿತ ಪುಸ್ತಕ. ರಾಜ್ಯ ಪಠ್ಯಕ್ರಮಕ್ಕೆ ಯಾವುದೇ ಸಂಬಂಧವಿಲ್ಲದ‌, ಯಾವುದೋ ಖಾಸಗಿ ಸಂಸ್ಥೆಯವರು ಮುದ್ರಿಸಿದ ಪುಸ್ತಕವೊಂದರಲ್ಲಿ ಮಲೆಯಾಳಿ ನಟನ ಭಾವಚಿತ್ರವನ್ನು ತೋರಿಸಿ ಅದನ್ನೂ ಸಹ ಬಿಜೆಪಿ ಸರ್ಕಾರದ ಶಾಲಾ ಪಠ್ಯದ ಕೇಸರೀಕರಣವೆಂದು ಬಣ್ಣಿಸುವ ನಿಮ್ಮ ಪ್ರಯತ್ನಕ್ಕೆ‌ ಅರ್ಥವಿಲ್ಲ. ದಾರಿ ತಪ್ಪಿಸುವ ಕೆಲಸವೆಂದರೆ‌ ಇದೇ ಇರಬೇಕು. ಅಥವಾ ನೀವೇ ದಾರಿ ತಪ್ಪಿರಬೇಕು! ಎಂದು ಟೀಕಿಸಿದ್ದಾರೆ.

ಇದನ್ನೂ ಓದಿ:‘ರುಖೋ ಜರಾ’ ಖ್ಯಾತಿಯ ಪ್ರಸಿದ್ದ ಯೂಟ್ಯೂಬರ್ ‘ಹಿಂದೂಸ್ಥಾನಿ ಭಾವು’ ಬಂಧನ!

ಫೋಟೊ ಬಗ್ಗೆ ಸ್ವತಃ ನಟ ಬಾಬನ್ ಕೂಡಾ ಸರ್ಕಾರದ ಕಾಲೆಳೆದಿದ್ದರು. ಪಠ್ಯದ ಪುಟವನ್ನು ತನ್ನ ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿರುವ ಬಾಬನ್, “ ಅಂತಿಮವಾಗಿ ಕರ್ನಾಟಕ ಸರ್ಕಾರದಲ್ಲಿ ನನಗೆ ಅಂಚೆಯಣ್ಣನ ಕೆಲಸ ಸಿಕ್ಕಿದೆ. ನನ್ನನ್ನು ಅಂತಹ ಹುದ್ದೆಗೆ ಕೊಂಡೊಯ್ದ ಅಂಚೆಯಣ್ಣನಿಗೆ ಧನ್ಯವಾದ ಹೇಳಲು ಮರೆಯುವುದಿಲ್ಲ” ಎಂದಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next