Advertisement

1ರಿಂದ 5ನೇ ತರಗತಿಗೆ ವಿದ್ಯಾರ್ಥಿಗಳಿಗೆ ಮೌಲ್ಯಾಂಕನ, ಸೇತು ಬಂಧ ಯೋಜನೆ: ಸುರೇಶ್ ಕುಮಾರ್

04:30 PM Apr 09, 2021 | Team Udayavani |

ಚಿತ್ರದುರ್ಗ: ರಾಜ್ಯದಲ್ಲಿ ಒಂದರಿಂದ ಐದನೇ ತರಗತಿಗೆ ಭೌತಿಕ ತರಗತಿಗಳು ನಡೆದಿಲ್ಲ. ಹಾಗಾಗಿ ಈ ವಿದ್ಯಾರ್ಥಿಗಳ ಮೌಲ್ಯಾಂಕನ ಮಾಡುವ ಚಿಂತನೆ ನಡೆದಿದೆ. ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಹಿಂದಿನ ತರಗತಿಯ ಪಾಠ ಕಲಿಸಿ ಮುಂದಿನ ತರಗತಿಯ ಪಾಠ ಕಲಿಸುವ ಸೇತು ಬಂಧ ಯೋಜನೆಯನ್ನೂ ಆರಂಭಿಸಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೂನ್ 21 ರಿಂದ ಎಸ್ ಎಸ್ ಎಲ್‌ಸಿ ಪರೀಕ್ಷೆಗಳು ಪ್ರಾರಂಭವಾಗಲಿದ್ದು, 8,75,798 ವಿದ್ಯಾರ್ಥಿಗಳಿಂದ ಪರೀಕ್ಷೆಗೆ ಹಾಜರಾಗುವ ಅರ್ಜಿ ಭರ್ತಿಯಾಗಿದೆ.  ಮೇ 24ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಪ್ರಾರಂಭವಾಗಲಿದ್ದು, 7,01,651 ವಿದ್ಯಾರ್ಥಿಗಳುಪರೀಕ್ಷೆಗೆ ಹಾಜರಾಗಲು ಅರ್ಜಿ ಸಲ್ಲಿಸಿದ್ದಾರೆಂದು ಮಾಹಿತಿ ನೀಡಿದರು.

ಇದನ್ನೂ ಓದಿ:18 ವರ್ಷ ಮೇಲ್ಪಟ್ಟವರು ಬೇಕಾದ ಧರ್ಮ ಆಯ್ಕೆ ಮಾಡಲು ಅರ್ಹರು : ಸುಪ್ರೀಂ ಕೋರ್ಟ್

ಈ ಪರೀಕ್ಷೆಗಳು ಕರ್ನಾಟಕದ ಮಕ್ಕಳ ಹಬ್ಬ. ಪರೀಕ್ಷೆ ನಡೆಸುವುದು ಶಿಕ್ಷಣ ಇಲಾಖೆಗೆ ಪ್ರತಿಷ್ಠೆ ಅಲ್ಲ. ಬದಲಾಗಿ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಅಗತ್ಯ ಕ್ರಮವಾಗಿದ್ದು, ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡು ಪರೀಕ್ಷೆಗೆ ಸಿದ್ಧತೆ ಮಾಡಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next