Advertisement

ಅಂತಾರಾಷ್ಟ್ರೀಯ ಕ್ರಿಕೆಟ್ ನಿಂದ ಸುರೇಶ್ ರೈನಾ ನಿವೃತ್ತಿ

08:56 PM Aug 15, 2020 | Mithun PG |

ನವದೆಹಲಿ: ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಮ್ಯಾಚ್ ವಿನ್ನರ್ ಎಂದೇ ಹೆಸರಾಗಿದ್ದ ಸುರೇಶ್ ರೈನಾ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ.

Advertisement

ಮಹೆಂದ್ರ ಸಿಂಗ್ ಧೋನಿ ನಿವೃತ್ತಿ ಘೋಷಿಸಿದ ಬೆನ್ನಲ್ಲೇ ಸುರೇಶ್ ರೈನಾ ಕೂಡ ವಿದಾಯ ಘೋಷಿಸಿದ್ದಾರೆ. ಏಕದಿನ ಹಾಗೂ ಟಿ20 ಕ್ರಿಕೇಟ್ ನಲ್ಲಿ ರೈನಾ ತಮ್ಮದೇ ಆದ ಛಾಪು ಮೂಡಿಸಿದ್ದರು. ಮಾತ್ರವಲ್ಲದೆ ಮಧ್ಯಮ ಕ್ರಮಾಂಕದಲ್ಲಿ ಬಂದು ಸ್ಪೋಟಕ ಆಟವಾಡಿ ಅನೇಕ ಪಂದ್ಯಗಳನ್ನು ಗೆಲ್ಲಿಸಿಕೊಟ್ಟಿದ್ದರು.

ರೈನಾ 1999ರಲ್ಲಿ ಕ್ರಿಕೆಟ್ ವೃತ್ತಿಜೀವನ ಆರಂಭಿಸಿದ್ದರು. 2003ಲ್ಲಿ ಉತ್ತರಪ್ರದೇಶ ರಣಜಿ ಟ್ರೋಫಿ ಗೆಲುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. 2005ರಲ್ಲಿ ಭಾರತೀಯ ಕ್ರಿಕಟ್ ತಂಡಕ್ಕೆ ಪದಾರ್ಪಣೆ ಮಾಡಿದ್ದರು. ಇದುವರೆಗೂ ಕ್ರಿಕೆಟ್ ನ  ಎಲ್ಲಾ ಸ್ವರೂಪದ ಆಟಗಳಲ್ಲಿ  ಶತಕ ಬಾರಿಸಿದ ಭಾರತದ ಏಕೈಕ ಬ್ಯಾಟ್ಸ್ ಮನ್ ಎಂಬ ದಾಖಲೆಗೆ ಪಾತ್ರರಾಗಿದ್ದಾರೆ.

ಸುರೇಶ್ ರೈನಾ 226 ಏಕದಿನ ಪಂದ್ಯಗಳನ್ನು ಆಡಿದ್ದು 5,615 ರನ್ ಬಾರಿಸಿದ್ದಾರೆ. ಇನ್ನು 78 ಟಿ20 ಪಂದ್ಯಗಳಲ್ಲಿ 1,605 ರನ್ ಬಾರಿಸಿದ್ದಾರೆ. 19 ಟೆಸ್ಟ್ ಪಂದ್ಯಗಳನ್ನು ಆಡಿರುವ ಅವರು 768 ರನ್ ಬಾರಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next