Advertisement

ರಾಜ್ಯಪಾಲರಿಗೆ ಶಸ್ತ್ರಚಿಕಿತ್ಸೆ; ಚೇತರಿಕೆ

10:48 PM Nov 27, 2019 | Team Udayavani |

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿರುವ ರಾಜ್ಯಪಾಲ ವಿ.ಆರ್‌. ವಾಲಾ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಬುಧವಾರ ಸಿಎಂ ಯಡಿಯೂರಪ್ಪ ಆಸ್ಪತ್ರೆಗೆ ತೆರಳಿ ಅವರ ಆರೋಗ್ಯ ವಿಚಾರಿಸಿದರು.

Advertisement

80 ವರ್ಷದ ವಜುಭಾಯಿ ವಾಲಾ ಅವರು ಹೃದ್ರೋಗ ಸಮಸ್ಯೆಯಿಂದ ಬಳಲುತ್ತಿದ್ದು, ನಗರದ ಪೋರ್ಟಿಸ್‌ ಆಸ್ಪತ್ರೆಯಲ್ಲಿ ಕೊರೊ ನರಿ ಆರ್ಟರಿ ಬೈಪಾಸ್‌ ಗ್ರಾಫ್ಟಿಂಗ್‌ (ಸಿಎಬಿಜಿ) ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಮಂಗಳವಾರ ಕುಟುಂಬದ ಸದಸ್ಯರೆಲ್ಲಾ ಭೇಟಿ ಮಾಡಿ ಮಾತುಕತೆ ನಡೆಸಿದರು. ಬುಧವಾರ ಯಡಿಯೂರಪ್ಪ ಅವರು ಭೇಟಿ ಮಾಡಿ, ಆರೋಗ್ಯ ವಿಚಾರಿಸಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.

Advertisement

Udayavani is now on Telegram. Click here to join our channel and stay updated with the latest news.

Next