Advertisement

ಸಂಸದ ಅನಂತಕುಮಾರ ಹೆಗಡೆ ಕಾಲಿಗೆ ಶಸ್ತ್ರ ಚಿಕಿತ್ಸೆ

07:54 PM Mar 07, 2021 | Team Udayavani |

ಶಿರಸಿ: ಸಂಸದ ಅನಂತಕುಮಾರ ಹೆಗಡೆ ಅವರಿಗೆ ಕಾಲಿನ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆಂದು ಅವರ ಆಪ್ತ ಕಾರ್ಯದರ್ಶಿ ಸುರೇಶ ಶೆಟ್ಟಿ ತಿಳಿಸಿದ್ದಾರೆ. ಕಳೆದ ಹಲವು ವರ್ಷಗಳಿಂದ ಹೆಗಡೆ ಅವರು ತೀವ್ರ ಬೆನ್ನು ಮತ್ತು ಕಾಲು ನೋವಿನಿಂದ ಬಳಲುತ್ತಿದ್ದರು.

Advertisement

ಇದೇ ಕಾರಣ ಕಳೆದ ಲೋಕಸಭಾ ಚುನಾವಣೆ ಸಂದರ್ಭ ರಾಜಕೀಯ ನಿವೃತ್ತಿ ಬಗ್ಗೆ ತಮ್ಮ ನಿರ್ಧಾರ ವ್ಯಕ್ತಪಡಿಸಿದ್ದರು. ಕೆಲ ತಿಂಗಳಿಂದ ಬೆನ್ನು ನೋವು ಮತ್ತು ಕಾಲು ನೋವು ಉಲ್ಬಣಗೊಂಡ ಹಿನ್ನೆಲೆಯಲ್ಲಿ ತಜ್ಞರು ತಕ್ಷಣವೇ ಸೂಕ್ತ ಶಸ್ತ್ರಚಿಕಿತ್ಸೆ ನಡೆಸಬೇಕಾದ ಅವಶ್ಯಕತೆ ಕುರಿತು ತಿಳಿಸಿದ್ದರು.

ಮಂಗಳೂರಿನ ಕೆ.ಎಸ್‌. ಹೆಗಡೆ ಆಸ್ಪತ್ರೆಯಲ್ಲಿ ಇದೀಗ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಸಂಸದರು ಚೇತರಿಸಿಕೊಳ್ಳುತ್ತಿದ್ದಾರೆ. ವೈದ್ಯರು ದೀರ್ಘಾವಧಿ  ವಿಶ್ರಾಂತಿ ಪಡೆಯಲು ಸೂಚಿಸಿರುವ ಹಿನ್ನೆಲೆಯಲ್ಲಿ ಪೂರ್ಣ ಗುಣಮುಖರಾಗುವವರೆಗೆ ಸಾರ್ವಜನಿಕ ಕಾರ್ಯಕ್ರಮ-ಭೇಟಿಗೆ ಲಭ್ಯವಿರಲ್ಲ ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next