Advertisement

ಮಂಗಳೂರಿನ ವೆನ್ಲಾಕ್ ಬಳಿ ನಿರ್ಮಾಣವಾಗಲಿರುವ ಸರ್ಜಿಕಲ್ ಕಟ್ಟಡ ಕಾಮಗಾರಿಗೆ ಶಿಲಾನ್ಯಾಸ

01:33 PM Dec 14, 2020 | Mithun PG |

ಮಂಗಳೂರು: ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಡಿ ರೂ.37.52 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಸರ್ಜಿಕಲ್  ಕಟ್ಟಡ ಕಾಮಗಾರಿಗೆ ಸೋಮವಾರ ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳಿನ್ ಕುಮಾರ್  ಕಟೀಲ್ ಶಿಲಾನ್ಯಾಸ ನೆರವೇರಿಸಿದರು.

Advertisement

ಬಳಿಕ ಮಾತನಾಡಿದ ಅವರು, ಮಂಗಳೂರು ಸ್ಮಾರ್ಟ್ ಸಿಟಿ  ಯೋಜನೆಯಡಿ ಕಾಮಗಾರಿಗಳು ವೇಗ ಪಡೆದುಕೊಳ್ಳುತ್ತಿವೆ. ದೇಶಲ್ಲಿಯೇ ಮಂಗಳೂರು ನಗರವನ್ನು ನಂಬರ್ ವನ್ ಮತ್ತು ಮಾದರಿ ನಗರವಾಗಿಸುವಲ್ಲಿ ಕೆಲಸ ಕಾರ್ಯಗಳು ಸಾಗುತ್ತಿವೆ ಎಂದರು.

ವೆನ್ಲಾಕ್ ಆಸ್ಪತ್ರೆ ಸುಸಜ್ಜಿತಗೊಳಿಸುವಲ್ಲಿ ಆದ್ಯತೆ ನೀಡಲಾಗಿದೆ. ಆದಷ್ಟು ಶೀಘ್ರ ನೂತನ ಕಟ್ಟಡ ನಿರ್ಮಾಣವಾಗುವುದರೊಂದಿಗೆ ಸಾರ್ವಜನಿಕರ ಸೇವೆಗೆ ಮುಕ್ತವಾಗಲಿದೆ ಎಂದವರು ಹೇಳಿದರು.

ನೂತನ ಕಟ್ಟಡವು 12089 ಚ.ಮೀ. ವಿಸ್ತೀರ್ಣ ಹೊಂದಿದ್ದು, ಐದು ಮಹಡಿಗಳನ್ನು ಒಳಗೊಳ್ಳಲಿದೆ. ಕ್ಷ- ಕಿರಣ, ಸ್ಕ್ಯಾನಿಂಗ್ ಘಟಕ ಮತ್ತು ವಿಕಿರಣ ಶಾಸ್ತ್ರ, ಲಾಂಡ್ರಿ, ಔಷಧಾಲಯ, ಅಲ್ಟ್ರಾಸೌಂಡ್, ಪ್ರತ್ಯೇಕ ಕ್ಲೀನ್ ಹಾಗೂ ಪೋಸ್ಟ್ ಕಾರಿಡಾರ್, ಪ್ರೀ -ಆಪರೇಟಿವ್ ಹಾಗೂ ಪೋಸ್ಟ್ ಆಪರೇಟಿವ್ ವ್ಯವಸ್ಥೆ ಸೇರಿದಂತೆ ಹಲವು ಸೌಲಭ್ಯಗಳನ್ನು ನೂತನ ಕಟ್ಟಡ ಒಳಗೊಳ್ಳಲಿದೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next