Advertisement
ಕಾಲಿವುಡ್‌ನ ಖ್ಯಾತ ನಿರ್ದೇಶಕ ಕಾರ್ತಿಕ್ ಸುಬ್ಬರಾಜ್ ಕಳೆದ ವರ್ಷ ʼಜಿಗರ್ತಾಂಡ ಡಬಲ್ಎಕ್ಸ್ʼ ಸಿನಿಮಾ ಮಾಡಿದ್ದರು. ಈ ಸಿನಿಮಾ ಕಾಲಿವುಡ್ ನಲ್ಲಿ ಹಿಟ್ ಸಾಲಿಗೆ ಸೇರಿತ್ತು. ಇದೇ ವರ್ಷದ ಮಾರ್ಚ್ ತಿಂಗಳಿನಲ್ಲಿ ಕಾರ್ತಿಕ್ ಸುಬ್ಬರಾಜ್ ಅವರು ಹೊಸ ಸಿನಿಮಾವನ್ನು ಅನೌನ್ಸ್ ಮಾಡಿದ್ದರು.
Related Articles
Advertisement
ಖ್ಯಾತ ನಟಿ ಪೂಜಾ ಹೆಗ್ಡೆ ಇದೇ ಮೊದಲ ಬಾರಿಗೆ ಸೂರ್ಯ ಹಾಗೂ ಕಾರ್ತಿಕ್ ಸುಬ್ಬರಾಜ್ ಅವರೊಂದಿಗೆ ಕೆಲಸ ಮಾಡಲಿದ್ದಾರೆ. ಆ ಮೂಲಕ ಸಿನಿಮಾದ ಬಗೆಗಿನ ಕುತೂಹಲ ಹೆಚ್ಚಾಗಿದೆ.
ಇದಲ್ಲದೆ ಈ ಸಿನಿಮಾದಲ್ಲಿ ಸೂರ್ಯ ಅವರ ಜೊತೆಗೆ ಮಲಯಾಳಂ ನಟ ಜೋಜು ಜಾರ್ಜ್ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ. ಜೂನ್ 2 ರಿಂದ ಚಿತ್ರೀಕರಣ ಆರಂಭಗೊಳ್ಳಲಿದ್ದು, ಅಂಡಮಾನ್‌ನಲ್ಲಿ 40-ದಿನ ಶೆಡ್ಯೂಲ್ ಹಾಕಿಕೊಳ್ಳಲಾಗಿದೆ. ಉಳಿದ ಚಿತ್ರೀಕರಣಕ್ಕಾಗಿ ಊಟಿ ಮತ್ತು ಇತರ ಸ್ಥಳಗಳಿಗೆ ತೆರಳುವ ಸಾಧ್ಯತೆಯಿದೆ ಎಂದು ವರದಿ ತಿಳಿಸಿದೆ.