ಡ್ರೀಮ್ ವಾರಿಯರ್ಸ್ ಪಿಚ್ಚರ್ ಲಾಂಛನದಡಿ ನಟ ವಾಣಿಜ್ಯ ಮಂಡಳಿ ಸೂರ್ಯ ಅವರ 45ನೇ ಚಿತ್ರ ನಿರ್ಮಾಣವಾಗುತ್ತಿದೆ. ಇತ್ತೀಚೆಗೆ ಈ ಚಿತ್ರದ ಮುಹೂರ್ತ ಸಮಾರಂಭ ನೆರವೇರಿತು.
ಕೊಯಮತ್ತೂರ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೊದಲ ಹಂತದ ಚಿತ್ರೀಕರಣ ನಡೆಸಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.
ಮೂಕುತಿ ಅಮ್ಮನ್, ವಿಟ್ಲದಂಥ ಸಾಮಾಜಿಕ ಕಳಕಳಿಯ ಚಿತ್ರಗಳನ್ನು ನಿರ್ದೇಶಿಸಿ ಹೆಸರುವಾಸಿಯಾದ ನಿರ್ದೇಶಕ ಆರ್.ಜೆ. ಬಾಲಾಜಿ ಸೂರ್ಯ ಅವರು ಈ ಹೊಸ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ.
ಎ.ಆರ್. ರೆಹಮಾನ್ ಅವರ ಸಂಗೀತ ಈ ಚಿತ್ರಕ್ಕಿರುವುದು ವಿಶೇಷ. ಆರಂಭಿಕ ಹಂತದಲ್ಲಿರುವ ಈ ಚಿತ್ರಕ್ಕೆ ದೊಡ್ಡ ತಾರಾಬಳಗ ಸೇರ್ಪಡೆಯಾಗಲಿದೆ. 2025ರಲ್ಲಿ ಚಿತ್ರವನ್ನು ತೆರೆಗೆ ತರಲು ಚಿತ್ರತಂಡ ಯೋಜಿಸಿಕೊಂಡಿದೆ.