Advertisement

ಉಪ ಚುನಾವಣೆ ಬಿಜೆಪಿ ಹಣ ಹಂಚುವ ಮೂಲಕ ಗೆಲ್ಲಲು ಯತ್ನ: ಸುರ್ಜೆವಾಲ ಆರೋಪ

09:26 PM Oct 25, 2021 | Team Udayavani |

ಬೆಂಗಳೂರು:ಹಾನಗಲ್‌ ಹಾಗೂ ಸಿಂದಗಿ ಉಪ ಚುನಾವಣೆಯಲ್ಲಿ ಬಿಜೆಪಿ ಹಣ ಹಂಚುವ ಮೂಲಕ ಗೆಲ್ಲಲು ಮುಂದಾಗಿದೆ. ಆದರೂ ಕಾಂಗ್ರೆಸ್‌ ಗೆಲ್ಲಲಿದೆ ಎಂದು ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ತಿಳಿಸಿದ್ದಾರೆ.

Advertisement

ಸುದ್ದಿಗಾರರ ಜತೆ ಮಾತನಾಡಿದ ಅವರು, ಎರಡೂ ಕ್ಷೇತ್ರಗಳ ಜನ ಬದಲಾವಣೆ ಬಯಸಿದ್ದಾರೆ. ಬಿಜೆಪಿಗೆ ವಿಷಯಾಧಾರಿತವಾಗಿ ಮತದಾರರ ಮುಂದೆ ಹೋಗಿಲ್ಲ. ಭ್ರಷ್ಟಾಚಾರದ ಹಣ ಬಳಕೆಗೆ ಮುಂದಾಗಿರುವ ಬಿಜೆಪಿಗೆ ಸೂಕ್ತ ಪಾಠ ಕಲಿಸಲು ಕಾಂಗ್ರೆಸ್‌ಗೆ ಮತ ಹಾಕಲಿದ್ದಾರೆ ಎಂದು ಹೇಳಿದರು.

ಕಾಂಗ್ರೆಸ್‌ ಎರಡೂ ಕ್ಷೇತ್ರಗಳಲ್ಲೂ ಇತಿಹಾಸ ಸೃಷ್ಟಿಸಲಿದೆ. ಈ ಚುನಾವಣೆಯಲ್ಲಿ ಪರದೆಯ ಹಿಂದೆ ಯಾರು ಯಾರ ಜತೆ ಒಪ್ಪಂದ ಮಾಡಿಕೊಂಡಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ. ಬಿಜೆಪಿ ಬೆಂಬಲಕ್ಕೆ ಯಾವ ಪಕ್ಷ ಇದೆ ಎಂಬುದು ರಾಜ್ಯದ ಜನತೆಗೆ ಅರ್ಥವಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ:ಉಪ ಚುನಾವಣೆ ಸಿಎಂಗೆ ಸೋಲಿನ ಭಯ :ಡಿ.ಕೆ.ಶಿವಕುಮಾರ್‌

ಬಿಜೆಪಿ ಸರ್ಕಾರದಲ್ಲಿ ಆಂತರಿಕ ಕಚ್ಚಾಟ ಜೋರಾಗಿದೆ. ಬೆಂಗಳೂರಿನಲ್ಲಿ ಜಿಲ್ಲಾ ಉಸ್ತುವಾರಿಗಾಗಿ ಇಬ್ಬರ ಸಚಿವರ ನಡುವೆ ಕುಸ್ತಿ ನಡೆಯುತ್ತಿದೆ. ಬೆಂಗಳೂರು ಅಭಿವೃದ್ಧಿಗೆ, ರಸ್ತೆ ಗುಂಡಿ ಮುಚ್ಚಲು ಜಿಲ್ಲಾ ಉಸ್ತುವಾರಿ ಕೇಳುತ್ತಿಲ್ಲ, ಲೂಟಿ ಹೊಡೆಯಲು ಉಸ್ತುವಾರಿ ಕೇಳುತ್ತಿದ್ದಾರೆ ಎಂದು ಟೀಕಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next