Advertisement

ಮುನಿಯಪ್ಪ ನಿವಾಸಕ್ಕೆ ಸುರ್ಜೇವಾಲ: ಕೆಲ ಹೊತ್ತು ಸಮಾಲೋಚನೆ

08:29 PM Aug 28, 2022 | Team Udayavani |

ಬೆಂಗಳೂರು: ಕೆಲ ಕಾಂಗ್ರೆಸ್‌ ಮುಖಂಡರ ನಡವಳಿಕೆಯಿಂದ ಮುನಿಸಿಕೊಂಡಿರುವ ಕೇಂದ್ರದ ಮಾಜಿ ಸಚಿವ ಕೆ.ಎಚ್‌.ಮುನಿಯಪ್ಪ ಅವರ ನಿವಾಸಕ್ಕೆ ಭಾನುವಾರ ಎಐಸಿಸಿಯ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ ಭೇಟಿ ನೀಡಿ ಕೆಲ ಹೊತ್ತು ಸಮಾಲೋಚನೆ ನಡೆಸಿದರು.

Advertisement

ಈ ವೇಳೆ ಮಾತನಾಡಿದ ಸುರ್ಜೇವಾಲ, ಕೆ.ಎಚ್‌.ಮುನಿಯಪ್ಪ ಅವರು ನನ್ನ ಹಿರಿಯ ಸಹೋದರ ಇದ್ದಂತೆ. ಅವರ ಮನೆ ನೋಡಬೇಕು ಎಂದು ಆಸೆಪಟ್ಟಿದ್ದೆ. ಆ ಹಿನ್ನೆಲೆಯಲ್ಲಿ ನಾನು ಅವರ ಮನೆಗೆ ಭೇಟಿ ನೀಡಿದ್ದೇನೆ. ಕಾಂಗ್ರೆಸ್‌ ಪಕ್ಷದ ಭಾರತ್‌ ಜೋಡೋ ಸೇರಿ ಹಲವು ವಿಚಾರಗಳ ಕುರಿತು ಚರ್ಚೆ ನಡೆಸಿದ್ದೇನೆ ಎಂದರು.

ಕಾಂಗ್ರೆಸ್‌ನಲ್ಲೆ ಇರುತ್ತೇನೆ

ಕೆ.ಎಚ್‌.ಮುನಿಯಪ್ಪ ಮಾತನಾಡಿ, ಸುರ್ಜೇವಾಲ ನಮ್ಮ ಕುಟುಂಬದ ಸದಸ್ಯರಾಗಿ ಬಂದಿದ್ದರು. ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಇಲ್ಲಿಗೆ ಬಂದಿಲ್ಲ. ಪಕ್ಷ ಸಂಘಟನೆ ಸೇರಿ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದೇವೆ. ಸುರ್ಜೇವಾಲ ತಂದೆಯ ಕಾಲದಿಂದ ನನ್ನ, ಅವರ ನಡುವೆ ವಿಶ್ವಾಸವಿದೆ ಎಂದು ತಿಳಿಸಿದರು.ನನ್ನ ಎಲ್ಲಾ ವಿಚಾರಗಳನ್ನು ಈಗಾಗಲೇ ಕಾಂಗ್ರೆಸ್‌ ಹೈಕಮಾಂಡ್‌ಗೆ ತಿಳಿಸಿದ್ದೇನೆ. ನಾನು ಇನ್ನೂ ಕಾಂಗ್ರೆಸ್‌ ಪಕ್ಷದಲ್ಲೇ ಇದ್ದೇನೆ, ಮುಂದೆಯೂ ಇರುತ್ತೇನೆ. ಎಲ್ಲವೂ ಸಮಾಧಾನವಾಗಿ ನಡೆಯುತ್ತಿದೆ, ಬೇರೆ ಚರ್ಚೆಯ ಅಗತ್ಯವಿಲ್ಲ ಎಂದು ಹೇಳಿದರು

Advertisement

Udayavani is now on Telegram. Click here to join our channel and stay updated with the latest news.

Next