Advertisement
ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಭೇಟಿ ನೀಡಿ ಮಾಹಿತಿ ಪಡೆದಿದ್ದು, ಆರೋಪಿಯನ್ನು ಶೀಘ್ರ ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.
Related Articles
Advertisement
ಆರೋಪಿ ಪ್ರಕಾಶ್ ತಲೆ ಮರೆಸಿಕೊಂಡಿದ್ದು, ಪತ್ತೆ ಕಾರ್ಯವನ್ನು ಚುರುಕುಗೊಳಿಸಲಾಗಿದೆ. ಮೃತ ಮೀನಾ ತಂದೆ, ತಾಯಿ, ಮೂವರು ಸಹೋದರಿಯರು ಹಾಗೂ ಇಬ್ಬರು ಸಹೋದರರನ್ನು ಅಗಲಿದ್ದಾಳೆ. ಮೀನಾ ಕೊನೆಯ ಪುತ್ರಿಯಾಗಿದ್ದಾಳೆ.
ಪ್ರಕಾಶ್ ಹಲ್ಲೆಯಿಂದ ಗಾಯಗೊಂಡಿರುವ ತಾಯಿಯನ್ನು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.ಕುಟುಂಬದ ಸದಸ್ಯರಿಗೆ ರಕ್ಷಣೆ
ಸುದ್ದಿಗಾರರೊಂದಿಗೆ ಮಾತನಾಡಿದ ಎಸ್‌ಪಿ ಕೆ.ರಾಮರಾಜನ್, ತೀವ್ರವಾಗಿ ಗಾಯಗೊಂಡಿರುವ ಮೀನಾಳ ತಾಯಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಆಸ್ಪತ್ರೆಗೆ ದಾಖಲಿಸಲಾಗುವುದು ಎಂದು ತಿಳಿಸಿದರು. ಮೀನಾಳನ್ನು ಭೀಕರವಾಗಿ ಹತ್ಯೆಗೈದಿರುವುದರಿಂದ ಆಕೆಯ ತಂದೆ, ತಾಯಿ ಹಾಗೂ ಕುಟುಂಬದ ಸದಸ್ಯರಿಗೂ ಪೊಲೀಸ್ ಭದ್ರತೆ ನೀಡಲಾಗುತ್ತಿದೆ. ತಾಯಿ ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆ ಮತ್ತು ಸೂರ್ಲಬ್ಬಿಯ ಮನೆಯ ಸಮೀಪ ಹೆಚ್ಚುವರಿ ಪೊಲೀಸ್ ಸಿಬಂದಿಯನ್ನು ನಿಯೋಜಿಸಲಾಗಿದೆ. ಆರೋಪಿ ಪ್ರಕಾಶ್ ಕೊಲೆ ಮಾಡುವ ಸಂದರ್ಭ ವಾಹನದೊಂದಿಗೆ ಮತ್ತೂಬ್ಬ ವ್ಯಕ್ತಿಯೂ ಇದ್ದ ಎಂದು ತಿಳಿದು ಬಂದಿದ್ದು, ಈತನ ಪತ್ತೆಗೂ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದರು. ಆತ್ಮಹತ್ಯೆ ಖಚಿತವಿಲ್ಲ
ಆರೋಪಿ ಪ್ರಕಾಶ್ ತನ್ನ ಮನೆಯ ಬಳಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವ್ಯಾಪಕವಾಗಿ ಸುದ್ದಿ ಹಬ್ಬಿದ ಕುರಿತು ಸ್ಪಷ್ಟೀಕರಣ ನೀಡಿರುವ ಎಸ್‌ಪಿ ಕೆ. ರಾಮರಾಜನ್ ಅವರು, ಆರೋಪಿಯ ಮೃತದೇಹ ಪತ್ತೆಯಾಗದೆ ಇರುವುದರಿಂದ ಆತ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಖಾತ್ರಿ ಪಡಿಸಲು ಸಾಧ್ಯವಿಲ್ಲ ಮತ್ತು ಖಚಿತವಲ್ಲ ಎಂದು ತಿಳಿಸಿದರು.