ಬೆಂಗಳೂರು: ರಾಜ್ಯದ ಎರಡು ವಿಧಾನಸಭೆ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ರಾಜಕೀಯ ಪಕ್ಷಗಳು ಈಗಾಗಲೇ ತಮ್ಮ ಚಟುವಟಿಕೆ ಆರಂಭಿಸಿದ್ದು, ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಕೆಲಸದಲ್ಲಿದೆ. ಈ ಬಗ್ಗೆ ಮಾತನಾಡಿದ ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ್ ಖರ್ಗೆ, ಕಾಂಗ್ರೆಸ್ ನಲ್ಲಿ ಅಭ್ಯರ್ಥಿಗಳ ಕೊರತೆಯಿಲ್ಲ. ಒಳ್ಳೆಯ ಸಪ್ರೈಸ್ ಅಭ್ಯರ್ಥಿ ಬರಬಹುದು ಎಂದಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ಚುನಾವಣೆಯಲ್ಲಿ ಯಾರು ಗೆಲ್ಲಬಹುದು ಎನ್ನುವುದನ್ನು ಅಧ್ಯಕ್ಷರು ನೋಡುತ್ತಾರೆ. ನಮ್ಮ ಸಂಸದರು ಇದರ ಬಗ್ಗೆ ಗಮನ ಇಟ್ಟಿದ್ದಾರೆ ಎಂದರು.
ಜೆಡಿಎಸ್ ಜೊತೆ ಕಾಂಗ್ರೆಸ್ ಮೈತ್ರಿವಿಚಾರದ ಬಗ್ಗೆ ಮಾತನಾಡಿದ ಅವರು, ನಾವು ಯಾರ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಪಕ್ಷದ ನಿಲುವು ಕೂಡ ಅದೇ ಆಗಿದೆ ಎಂದರು.
ಇದನ್ನೂ ಓದಿ:ಯಾವುದೇ ಗೊಂದಲವಿಲ್ಲ, ಪಕ್ಷದಲ್ಲಿ ಅಭ್ಯರ್ಥಿಗಳ ಆಯ್ಕೆ ತೀರ್ಮಾನವಾಗಲಿದೆ: ಅಶ್ವಥ್ ನಾರಾಯಣ
ಮುನಿರತ್ನಂ ಕಾಂಗ್ರೆಸ್ ಗೆ ವಾಪಸ್ ಬರುವ ವಿಚಾರದ ಬಗ್ಗೆ ಪ್ರಶ್ನೆಗೆ ಉತ್ತರಿಸಿದ ಅವರು, ಇದರ ಬಗ್ಗೆ ಅಧ್ಯಕ್ಷರನ್ನೇ ಕೇಳಬೇಕು. ಯಾರು ಬರ್ತಾರೋ, ಯಾರು ಕರೆದುಕೊಳ್ತಾರೋ ಅವರನ್ನೇ ಕೇಳಿ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ಬೆಂಗಳೂರುನ ಆರ್ ಆರ್ ನಗರ ಮತ್ತು ತುಮಕೂರಿನ ಶಿರಾ ಕ್ಷೇತ್ರದ ಉಪಚುನಾವಣೆ ನವೆಂಬರ್ 3ರಂದು ನಡೆಯಲಿದೆ. ಶಿರಾ ಕ್ಷೇತ್ರದಿಂದ ಟಿ.ಬಿ ಜಯಚಂದ್ರ ಅವರ ಹೆಸರನ್ನು ಕಾಂಗ್ರೆಸ್ ಅಂತಿಮಗೊಳಿಸಿದೆ.