ಮುಂಬೈ: ಕರ್ನಾಟಕದಲ್ಲಿ ಮೇ 10 ರಂದು ಮತದಾನ ನಡೆಯಲಿರುವ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ಮೋದಿ ಅವರು ಧಾರ್ಮಿಕ ಘೋಷಣೆಗಳನ್ನು ನೀಡಿರುವುದು ನನಗೆ ಆಶ್ಚರ್ಯ ತಂದಿದೆ ಎಂದು ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಹೇಳಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು ಕರ್ನಾಟಕ ವಿಧಾನಸಭಾ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ಮೋದಿ ಅವರು ಧಾರ್ಮಿಕ ಘೋಷಣೆಗಳನ್ನು ನೀಡಿರುವುದು ನನಗೆ ಆಶ್ಚರ್ಯ ತಂದಿದೆ.
ನಾವು ಜಾತ್ಯತೀತತೆಯ ಪರಿಕಲ್ಪನೆಯನ್ನು ಒಪ್ಪಿಕೊಂಡಿದ್ದೇವೆ. ಆದರೆ ಚುನಾವಣೆಯಲ್ಲಿ ಧರ್ಮ ಅಥವಾ ಧಾರ್ಮಿಕ ವಿಷಯವನ್ನು ಕೈಗೆತ್ತಿಕೊಂಡಾಗ, ಅದು ವಿಭಿನ್ನ ರೀತಿಯ ವಾತಾವರಣವನ್ನು ಸೃಷ್ಟಿಸುತ್ತದೆ ಮತ್ತು ಅದು ಒಳ್ಳೆಯ ಬೆಳವಣಿಗೆ ಅಲ್ಲ ಎಂದು ಹೇಳಿದ್ದಾರೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಪವಾರ್ ಹೇಳಿದ್ದಾರೆ.
ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ಬಾರ್ಸು ಗ್ರಾಮದಲ್ಲಿ ಬೃಹತ್ ತೈಲ ಸಂಸ್ಕರಣಾಗಾರ ಯೋಜನೆಯನ್ನು ವಿರೋಧಿಸಿ ಸ್ಥಳೀಯರು ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು , “ನಾನು ಅಲ್ಲಿಗೆ ಭೇಟಿ ನೀಡಲು ಉತ್ಸುಕನಾಗಿದ್ದೇನೆ. ಆದರೆ ನಾನು ಯಾವಾಗ ಮತ್ತು ಹೇಗೆ ಭೇಟಿ ನೀಡುತ್ತೇನೆ ಎಂಬುದನ್ನು ನಂತರ ನಿರ್ಧರಿಸಲಾಗುವುದು ಎಂದು ಹೇಳಿದರು.