Advertisement

ಗೋಕಾಕ್ ನಲ್ಲಿ ಅಚ್ಚರಿ ಬೆಳವಣಿಗೆ; ಲಖನ್ ನಂತರ ನಾಮಪತ್ರ ಸಲ್ಲಿಸಿದ ಸತೀಶ್ ಜಾರಕಿಹೊಳಿ!

09:31 AM Nov 19, 2019 | Nagendra Trasi |

ಗೋಕಾಕ್; 15 ಕ್ಷೇತ್ರಗಳಿಗೆ ಡಿ.5ರಂದು ನಡೆಯಲಿರುವ ಉಪಚುನಾವಣೆ ಹಿನ್ನೆಲೆಯಲ್ಲಿ ನಾಮಪತ್ರ ಸಲ್ಲಿಸಲು ಸೋಮವಾರ ಕಡೇ ದಿನವಾಗಿದ್ದು, ಅಭ್ಯರ್ಥಿಗಳು ಭರ್ಜರಿ ಬಲಪ್ರದರ್ಶನದೊಂದಿಗೆ ನಾಮಪತ್ರ ಸಲ್ಲಿಸುತ್ತಿದ್ದಾರೆ. ಆದರೆ ಗೋಕಾಕ್ ನಲ್ಲಿ ಕೊನೇ ಕ್ಷಣದ ಅಚ್ಚರಿ ಬೆಳವಣಿಗೆ ಎಂಬಂತೆ ಕಾಂಗ್ರೆಸ್ ನಿಂದ ಸತೀಶ್ ಜಾರಕಿಹೊಳಿ ಕೂಡಾ ನಾಮಪತ್ರ ಸಲ್ಲಿಸಿದ್ದಾರೆ.

Advertisement

ಗೋಕಾಕ್ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಲಖನ್ ಜಾರಕಿಹೊಳಿ ಸೋಮವಾರ ನಾಮಪತ್ರ ಸಲ್ಲಿಸಿದ್ದರು. ನಂತರ ಸತೀಶ್ ಜಾರಕಿಹೊಳಿ ಪ್ರತ್ಯೇಕವಾಗಿ ನಾಮಪತ್ರ ಸಲ್ಲಿಸಿರುವುದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.

ನನಗೆ ಟಿಕೆಟ್ ತಪ್ಪಿಸಲು ರಮೇಶ್ ಜಾರಕಿಹೊಳಿ ಗೇಮ್ ಪ್ಲಾನ್ ಮಾಡಿದ್ದರು ಎಂದು ಗೋಕಾಕ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಲಖನ್ ಜಾರಕಿಹೊಳಿ ಆರೋಪಿಸಿದ್ದಾರೆ.

ಸತೀಶ್ ಹಾಗು ನಾನು ರಾಮ-ಲಕ್ಷ್ಮಣ ಇದ್ದಂತೆ. ರಮೇಶ್ ಜಾರಕಿಹೊಳಿ ಅಳಿಯಂದಿರ ಭ್ರಷ್ಟಾಚಾರ ವಿರುದ್ಧ ನಿರಂತರ ಹೋರಾಟ ಮಾಡುವುದಾಗಿ ಲಖನ್ ಹೇಳಿದ್ದರು. ಇದೀಗ ಗೋಕಾಕ್ ನಲ್ಲಿ ಸತೀಶ್ ಜಾರಕಿಹೊಳಿ ನಾಮಪತ್ರ ಸಲ್ಲಿಸಿರುವುದು ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.

Advertisement

Udayavani is now on Telegram. Click here to join our channel and stay updated with the latest news.

Next