Advertisement

Naxalites; ಶರಣಾಗತಿ ಪ್ಯಾಕೇಜ್ ಬೆಚ್ಚಿಬೀಳಿಸಿದೆ: ಸುನಿಲ್ ಕುಮಾರ್ ತೀವ್ರ ಆಕ್ರೋಶ

11:14 AM Jan 08, 2025 | Team Udayavani |

ಉಡುಪಿ: ಆರು ಮಂದಿ ನಕ್ಸಲರಿಗೆ ರಾಜ್ಯ ಸರ್ಕಾರ ಶರಣಾಗತಿ ಪ್ಯಾಕೇಜ್ ನೀಡುತ್ತಿರುವುದು ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ ಎಂದು ಬಿಜೆಪಿ ಶಾಸಕ ವಿ.ಸುನಿಲ್ ಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

Advertisement

ಚಿಕ್ಕಮಗಳೂರಿನಲ್ಲಿ ಬುಧವಾರ(ಜ8) ಆರು ಮಂದಿ ನಕ್ಸಲರು ಶರಣಾಗುವ ಮುನ್ನ ಸುನಿಲ್ ಕುಮಾರ್ ಅವರು ಎಕ್ಸ್ ಪೋಸ್ಟ್ ಮಾಡಿ ಅಸಮಾಧಾನ ಹೊರ ಹಾಕಿದ್ದಾರೆ. ”ಯಾವ ಮಾನದಂಡದ ಮೇಲೆ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ?ಎಂಬುದನ್ನು ಸ್ಪಷ್ಟಪಡಿಸಬೇಕು.ಸಿದ್ದರಾಮಯ್ಯ ಅವರು ಅಧಿಕಾರಕ್ಕೆ ಬಂದಾಗೆಲಲ್ಲ ನಕ್ಸಲರಿಗೆ – ಉಗ್ರರಿಗೆ ಸುಗ್ಗಿ.ಅವರಿಗೆ ಕ್ಷಮೆ,ಪ್ರಕರಣ ರದ್ದು, ಸುಖ-ಸೌಕರ್ಯ ಎಲ್ಲವೂ” ಎಂದು ಆಕ್ರೋಶ ಹೊರ ಹಾಕಿದ್ದಾರೆ.

ರಾಷ್ಟ್ರಕವಿ ಕುವೆಂಪು ಅವರ ಕರ್ಮಭೂಮಿ ಆಗಿದ್ದ ತಣ್ಣಗಿನ ಮಲೆನಾಡಲ್ಲಿ ಬಂದೂಕಿನ ಮೊರೆತ ಕೇಳಿಸಿದ ನಕ್ಸಲರಿಗೆ ಕ್ಷಮೆ ಕೊಟ್ಟು ಅವರನ್ನು ನಗರ ನಕ್ಸಲರಾಗಿಸಿ ಬುಡಮೇಲು ಕೃತ್ಯಕ್ಕೆ ಲೈಸೆನ್ಸ್ ಕೊಡುತ್ತೀರಾ ಸಿದ್ದರಾಮಯ್ಯ ನವರೇ?ಇದರಿಂದ ಪೊಲೀಸರ ಆತ್ಮ ಸ್ಥೈರ್ಯ ಏನಾಗಬೇಡ?ಈ ಶರಣಾಗತಿ ಪ್ರಹಸನವೇ ಅನುಮಾನಾಸ್ಪದವಾಗಿದೆ” ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next