Advertisement

ಚರ್ಚ್‌ಗಳ ಸಮೀಕ್ಷೆ: ಹೈಕೋರ್ಟ್‌ಗೆ ಅರ್ಜಿ

10:05 AM Oct 24, 2021 | Team Udayavani |

ಬೆಂಗಳೂರು: ರಾಜ್ಯದಲ್ಲಿರುವ ಚರ್ಚ್‌ಗಳ ಬಗ್ಗೆ ಮಾಹಿತಿ ಸಂಗ್ರಹಿಸುವ ಸಂಬಂಧ ಅಲ್ಪಸಂಖ್ಯಾತರ ನಿರ್ದೇಶನಾಲಯ ಜು.7ರಂದು ಹೊರಡಿಸಿರುವ ಪತ್ರವನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿದೆ.

Advertisement

ಈ ವಿಚಾರವಾಗಿ ಪೀಪಲ್ಸ್‌ ಯೂನಿಯನ್‌ ಫಾರ್‌ ಸಿವಿಲ್‌ ಲಿಬರ್ಟೀಸ್‌ (ಪಿಯುಸಿಎಲ್‌) ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ (ಅ.25) ಈ ಅರ್ಜಿಯ ವಿಚಾರಣೆ ನಡೆಸಲಿದೆ. ಚರ್ಚ್‌ಗಳು ಇರುವ ಸ್ಥಳ, ತಾಲ್ಲೂಕು, ಜಿಲ್ಲೆ ಹಾಗೂ ಅವುಗಳ ವಿಧಾನಸಭಾ ಕೇತ್ರದ ವ್ಯಾಪ್ತಿಯ ದತ್ತಾಂಶಗಳು ಮತ್ತು ಚರ್ಚ್‌ಗಳ ಹೆಸರು, ವಿಳಾಸ, ಖಾತೆ ಸಂಖ್ಯೆ, ಸರ್ವೇ ಸಂಖ್ಯೆ ಹಾಗೂ ಪಾದ್ರಿಗಳ ವಿವರಗಳನ್ನು ಸಂಗ್ರಹಿಸಲು ಸರ್ಕಾರದ ಪತ್ರದಲ್ಲಿ ಸೂಚಿಸಲಾಗಿದೆ.

ಇದನ್ನೂ ಓದಿ:- ಲೆಹೆಂಗದಲ್ಲಿ ವಿದೇಶಕ್ಕೆ ಮಾದಕ ವಸ್ತುಗಳ ರಫ್ತು

ಆದರೆ, ಯಾವ ಕಾರಣಕ್ಕಾಗಿ ಈ ಮಾಹಿತಿಗಳನ್ನು ಸಂಗ್ರಹಿಸಲಾಗುತ್ತಿದೆ ಎಂಬುದನ್ನು ಹೇಳಲಾಗಿಲ್ಲ. ಅಲ್ಪಸಂಖ್ಯಾತರ ವರ್ಗಕ್ಕೆ ಬರುವ ಇತರ ಸಮುದಾಯಗಳನ್ನು ಬಿಟ್ಟು ಕೇವಲ ಚರ್ಚ್‌ಗಳ ಮಾಹಿತಿ ಸಂಗ್ರಹಿಸುತ್ತಿರುವುದೇಕೆ ಎಂದು ಸ್ಪಷ್ಟಪಡಿಸಿಲ್ಲ ಎಂದು ಅರ್ಜಿಯಲ್ಲಿ ದೂರಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next